More

    ದ್ವಿತೀಯ ಪಿಯು ಇಂಗ್ಲಿಷ್​ ಉತ್ತರ ಪತ್ರಿಕೆ ಮೌಲ್ಯಮಾಪನ ಆರಂಭ

    ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್​ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಸೋಮವಾರ ಆರಂಭಗೊಂಡಿದೆ.

    ವಿಕೇಂದ್ರಿಕೃತ ವ್ಯವಸ್ಥೆಯಡಿ ಮೌಲ್ಯಮಾಪನ ನಡೆಯುತ್ತಿದೆ. ಆಯಾ ಜಿಲ್ಲೆಯ ಉತ್ತರ ಪತ್ರಿಕೆಗಳನ್ನು ಉಳಿದ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಿಗೆ ಕಳುಹಿಸುವ ಬಗ್ಗೆ ಈ ಹಿಂದೆಯೇ ಪಿಯು ಶಿಕ್ಷಣ ಇಲಾಖೆಯಿಂದ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿತ್ತು. ಅದರಂತೆ ಜಿಲ್ಲಾ ಉಪನಿರ್ದೇಶಕರು ಸಂಬಂಧಪಟ್ಟ ಜಿಲ್ಲೆಗಳಿಗೆ ಅಗತ್ಯ ಭದ್ರತೆಯೊಂದಿಗೆ ಉತ್ತರ ಪತ್ರಿಕೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿರಿ ಸಚಿವ ಸುಧಾಕರ್ ತಂದೆಗೆ ಕರೊನಾ ಪಾಸಿಟಿವ್!

    ಮೌಲ್ಯಮಾಪಕರಿಗೆ ಇಲಾಖೆಯಿಂದ ಸಂದೇಶ ರವಾನಿಸಿದ ಹಿನ್ನೆಲೆಯಲ್ಲಿ ಮೌಲ್ಯಮಾಪಕರು ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಹಾಜರಾಗಿದ್ದಾರೆ. ಇಂಗ್ಲಿಷ್​ ಉತ್ತರ ಪತ್ರಿಕೆ ಹೊರತುಪಡಿಸಿ ಉಳಿದ ವಿಷಯಗಳ ಮೌಲ್ಯಮಾಪನ ಕಾರ್ಯ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.

    ಇಂಗ್ಲಿಷ್​ ಉತ್ತರ ಪತ್ರಿಕೆ ಮೌಲ್ಯಮಾಪನ ಹಾಗೂ ಆನ್​ಲೈನ್​ ಅಂಕ ನಮೂದು ಪೂರ್ಣಗೊಂಡ ನಂತರ ಫಲಿತಾಂಶ ಪ್ರಕಟಿಸುವ ಬಗ್ಗೆ ಇಲಾಖೆ ಚಿಂತಿಸಿದೆ. ಉಪನ್ಯಾಸಕರ ಕೋರಿಕೆ ಮೇರೆಗೆ ಇಂಗ್ಲಿಷ್​ ಉತ್ತರ ಪತ್ರಿಕೆಯ ಮೌಲ್ಯಮಾಪನಕ್ಕೆ ಜಿಲ್ಲಾ ಕೇಂದ್ರದಲ್ಲೇ ವ್ಯವಸ್ಥೆ ಮಾಡಿಕೊಡಲಾಗಿದೆ. ಸೀಮಿತ ಜಿಲ್ಲೆಗಳಲ್ಲಿ ಎರಡು ಜಿಲ್ಲೆ ಸೇರಿಸಿ ಒಂದು ಕೇಂದ್ರ ಮಾಡಲಾಗಿದೆ. ಕರೊನಾ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೆಂಗಳೂರು ನಗರದಲ್ಲಿ 2 ಕೇಂದ್ರ, ಮಂಗಳೂರು, ಧಾರವಾಡ, ಕಲಬುರಗಿ, ಬೆಳಗಾವಿ, ರಾಯಚೂರು, ಉತ್ತರ ಕನ್ನಡ, ಹಾಸನ, ದಾವಣಗೆರೆ, ಬಳ್ಳಾರಿ, ಮೈಸೂರು, ತುಮಕೂರು, ಹಾವೇರಿ, ಬಾಗಲಕೋಟೆ, ಗದಗ, ಬೀದರ್​, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪಿಯುಸಿ ಇಂಗ್ಲಿಷ್​ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ.

    ಇದನ್ನೂ ಓದಿರಿ 

    ಮಹಿಳೆಯ ಮೈಮುಟ್ಟಿದ ಕಾಮುಕ… ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts