

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳಿದಿರುವ ಆಂಗ್ಲ ಭಾಷಾ ಪತ್ರಿಕೆಯ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಾರ್ಚ್ 2020ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಮುಕ್ತಾಯಗೊಂಡಿರುವ 38 ವಿಷಯಗಳ (Subject Papers) ಮಾದರಿ ಉತ್ತರಗಳನ್ನು (Key Answers) ಇಲಾಖೆಯ ವೆಬ್ ಸೈಟ್ pue.kar.nic.in ನಲ್ಲಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.
ಆಂಗ್ಲಭಾಷಾ ಪರೀಕ್ಷೆಯನ್ನು ನಡೆಸುವುದು ಬಾಕಿ ಇದ್ದು, ಈ ಕುರಿತಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನು ಇಲಾಖೆ ಪ್ರಾರಂಭಿಸಿದೆ ಎಂದು ತಿಳಿಸಿದ್ದಾರೆ.