ಪಿಯುಸಿ ಪೂರಕ ಪರೀಕ್ಷೆ ಇಂದಿನಿಂದ, ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮಂಗಳವಾರ (ಜೂ.11)ದಿಂದ ಆರಂಭವಾಗಲಿದ್ದು, 2,29,609 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆ ಜೂ.20ರಂದು ಅಂತ್ಯಗೊಳ್ಳಲಿದ್ದು, ಇಂಗ್ಲಿಷ್ ಮಾಧ್ಯಮದ 1,17,119 ಹಾಗೂ ಕನ್ನಡ ಮಾಧ್ಯಮದ 1,12,490 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಗೆ ರಾಜ್ಯವ್ಯಾಪಿ 302 ಪರೀಕ್ಷಾ ಕೇಂದ್ರಗಳು ನಿಗದಿಯಾಗಿವೆ. 302 ಮುಖ್ಯ ಅಧೀಕ್ಷಕರು ಹಾಗೂ 302 ಸಹ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಆನ್​ಲೈನ್ ಮೂಲಕ ಪರೀಕ್ಷೆಯ ಪ್ರವೇಶ ಪತ್ರ ಪಡೆದಿದ್ದಾರೆ.

 

ಉಚಿತ ಪ್ರಯಾಣ ಸೌಲಭ್ಯ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ನಿರ್ವಾಹಕರಿಗೆ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣ ಬೆಳೆಸಬಹುದು.ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷಾ ವಸ್ತುಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಸಲಾಗಿದೆ.

Leave a Reply

Your email address will not be published. Required fields are marked *