More

    ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ

    ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಗೆ ಹಾಜರಾಗಿದ್ದ 6,75,277 ವಿದ್ಯಾರ್ಥಿಗಳ ಪೈಕಿ 4,17,297 ಮಂದಿ ಉತ್ತೀರ್ಣರಾಗಿದ್ದಾರೆ. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಂದಿನ ತಿಂಗಳು ಅಂದರೆ ಆಗಸ್ಟ್​ನಲ್ಲಿ ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಜುಲೈ ಕೊನೇ ವಾರದಲ್ಲಿ ವೇಳಾಪಟ್ಟಿ ಪ್ರಕಟವಾಗಲಿದೆ.

    ಪೂರಕ ಪರೀಕ್ಷೆಯ ಶುಲ್ಕ ಪಾವತಿಸಲು ಜು.31 ಕೊನೇ ದಿನ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್​ ಸಹಿತ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಆ. 3ರೊಳಗೆ ಕಳುಹಿಸಬೇಕಿದೆ.

    ಇದನ್ನೂ ಓದಿರಿ ಪಿಯು ಪರೀಕ್ಷೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪಾಸ್!​

    ಸಪ್ಲಿಮೆಂಟರಿ ಪರೀಕ್ಷೆಗೆ ಶುಲ್ಕ ಕಟ್ಟಿಸಿಕೊಳ್ಳಲು ಕಾಲೇಜಿನ ಪ್ರಾಂಶುಪಾಲರು ಅನುತ್ತೀರ್ಣ ಒಎಂಆರ್​ ಅರ್ಜಿಗಳಿಗಾಗಿ ಕಾಯಬೇಕಾದ ಅವಶ್ಯಕತೆ ಇಲ್ಲ. ಫಲಿತಾಂಶ ಪಟ್ಟಿ ಆಧಾರದ ಮೇರೆಗೆ ಅನುತ್ತೀರ್ಣ ವಿಷಯಗಳಿಗೆ ನಿಯಮಾನುಸಾರ ಪರೀಕ್ಷಾ ಶುಲ್ಕ ಕಟ್ಟಿಸಿಕೊಳ್ಳಬೇಕಿದೆ.

    ಅನುತ್ತೀರ್ಣರಾದವರು ಗೈರಾದವರು ಭಯ ಮತ್ತು ಆತಂಕಕ್ಕೆ ಒಳಗಾಗಬೇಡಿ. ಪೂರಕ ಪರೀಕ್ಷೆ ಬಾಕಿ ಇದೆ. ಅನುತ್ತೀರ್ಣರಾದ ಮಕ್ಕಳಿಗೆ ಪಾಲಕರು ಸಮಾಧಾನ ಮಾಡಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ತಿಳಿಸಿದ್ದಾರೆ.

    ಇದನ್ನೂ ಓದಿರಿ ಅದ್ದೂರಿ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ಬ್ರೇಕ್​

    ಮರು ಮೌಲ್ಯಮಾಪನ: ಇನ್ನು ಫಲಿತಾಂಶ ತೃಪ್ತಿಯಾಗದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನಿಂಗ್​ ಪ್ರತಿ ಪಡೆಯಲು, ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ ಹಾಗೂ ಅಂಕಗಳ ಮರು ಏಣಿಕೆಗೆ ಅವಕಾಶ ಕಲ್ಪಿಸಲಾಗಿದೆ.

    ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಜು.16ರಿಂದ ಜು.30ರವರೆಗೆ ಅವಕಾಶ ಕಲ್ಪಿಸಿದೆ. ಸ್ಕ್ಯಾನಿಂಗ್​ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್​ ಪ್ರತಿ ಡೌನ್​ಲೋಡ್​ ಮಾಡಿಕೊಳ್ಳಲು ಆ. 3ರಿಂದ 7ರವರೆಗೆ ಅವಕಾಶ ನೀಡಲಾಗಿದೆ. ಮರುಮೌಲ್ಯಮಾಪನಕ್ಕೆ ಮತ್ತು ಮರು ಏಣಿಕೆಗಾಗಿ ಆ.4ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದು. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ.

    ಕಲಾ ವಿಭಾಗದಲ್ಲಿ ರೈತನ ಮಗ ಕರಿಗೌಡ ದಾಸನಗೌಡ್ರ ರಾಜ್ಯಕ್ಕೆ ಟಾಪರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts