More

    ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಪ್ರಾಯೋಗಿಕ ಮೌಲ್ಯಮಾಪನ ಪ್ರಕ್ರಿಯೆ ಆರಂಭ

    ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್​ ನಡುವೆಯೂ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಪ್ರಾಯೋಗಿಕ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ಮೇ 21ರಿಂದ ದಕ್ಷಿಣ ಕರ್ನಾಟಕದ 8 ಜಿಲ್ಲೆಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭಿಸುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಪರೀಕ್ಷೆ) ಶೈಲಜಾ ತಿಳಿಸಿದ್ದಾರೆ.

    ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಸೋಮವಾರ ಭೇಟಿಯಾದ ಸಂದರ್ಭದಲ್ಲಿ ಶೈಲಜಾ ಅವರು ಮೊದಲಿಗೆ ಅರ್ಥಶಾಸ್ತ್ರ ಉತ್ತರಪತ್ರಿಕೆಗಳೊಂದಿಗೆ ಪ್ರಾಯೋಗಿಕ ಮೌಲ್ಯಮಾಪನ ಕಾರ್ಯ ಆರಂಭವಾಗುವುದಾಗಿ ತಿಳಿಸಿದರು ಎನ್ನಲಾಗಿದೆ.

    ಇದರ ಸಾಧಕ-ಬಾಧಕಗಳನ್ನು ಗಮನಿಸಿ, ಉಳಿದ ವಿಷಯಗಳ ಮೌಲ್ಯಮಾಪನ ಕಾರ್ಯ ಮುಂದುವರಿಸುವ ಬಗ್ಗೆ ತೀರ್ಮಾನಿಸುವುದಾಗಿಯೂ ಅವರು ತಿಳಿಸಿದರು ಎಂದು ಹೇಳಲಾಗಿದೆ.‘

    ಸಾರಿಗೆ ಸೌಲಭ್ಯ ಇನ್ನೂ ಸಂಪೂರ್ಣವಾಗಿ ಆರಂಭವಾಗದ ಹಿನ್ನೆಲೆಯಲ್ಲಿ ಉಪನ್ಯಾಸಕರು ಎಲ್ಲೆಲ್ಲಿ ಇದ್ದಾರೋ ಆಯಾ ಜಿಲ್ಲೆಗಳಲ್ಲಿ ಅಥವಾ ಅನುಕೂಲವಿರುವ ಜಿಲ್ಲಾ ಕೇಂದ್ರಗಳಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿಕೊಂಡಾಗ ಅವರು ಈ ವಿಷಯ ತಿಳಿಸಿದರು ಎನ್ನಲಾಗಿದೆ.

    ಇದನ್ನೂ ಓದಿ: ಜೂನ್​ 25ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ; ಜೂನ್​ 18ರಂದು ಪಿಯುಸಿ ಇಂಗ್ಲಿಷ್​ ಎಕ್ಸಾಂ

    ಅನಾರೋಗ್ಯವಿದ್ದವರಿಗೆ ವಿನಾಯ್ತಿ: ಗಂಭೀರವಾದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಉಪನ್ಯಾಸಕರಿಗೆ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ಕೊಡುವಂತೆ ಸಂಘದ ಪದಾಧಿಕಾರಿಗಳು ಮಾಡಿಕೊಂಡ ಮನವಿಗೆ ಶೈಲಜಾ ಸಕಾರಾತ್ಮಕವಾಗಿ ಸ್ಪಂದಿಸಿದರು ಎನ್ನಲಾಗಿದೆ.

    ಅನಿರ್ದಿಷ್ಟಾವಧಿ ಮುಂದಕ್ಕೆ: ಕೋವಿಡ್​ 19 ಲಾಕ್​ಡೌನ್​ ಹಾಗೂ ಸೋಂಕು ಹರಡುವ ಭೀತಿ ಜತೆಗೆ ಮೌಲ್ಯಮಾಪನ ಕಾರ್ಯ ವಿಳಂಬವಾಗಿರುವ ಹಿನ್ನೆಲೆಯಲ್ಲಿ 2020-21ನೇ ಶೈಕ್ಷಣಿಕ ವರ್ಷಾರಂಭವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಶೈಲಜಾ ಆದೇಶ ಹೊರಡಿಸಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts