More

    ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ

    ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

    ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.

    ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

    ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

    ದ್ವಿತೀಯ ಪಿಯುಸಿ 81.15% ಫಲಿತಾಂಶ ಬಂದಿದೆ. ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ.ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ನಲ್ಲಿ ನೋಡಿಕೊಳ್ಳಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts