More

    ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಮತ್ತೆ ಬೆಂಕಿ! ಐವರ ಸಾವಿನ ನಂತರವೂ ತಣಿಯದ ಅಗ್ನಿ

    ಪುಣೆ: ಕೋವಿಶೀಲ್ಡ್​ ಲಸಿಕೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ಪುಣೆಯ ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಒಂದೇ ದಿನದಲ್ಲಿ ಎರಡೆರೆಡು ಬಾರಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ ಬೆಂಕಿ ಹೊತ್ತಿಕೊಂಡು ಉರಿದಿದ್ದ ಕಟ್ಟಡದ ಮತ್ತೊಂದು ಕಂಪಾರ್ಟ್​ಮೆಂಟ್​ನಲ್ಲಿ ಸಂಜೆ ಬೆಂಕಿ ಹೊತ್ತಿ ಉರಿದಿದೆ. ಈಗಾಗಲೇ ಅವಘಡದಲ್ಲಿ ಐವರು ಸಾವನ್ನಪ್ಪಿದ್ದು, ನಾಲ್ವರನ್ನು ರಕ್ಷಿಸಿರುವುದಾಗಿ ತಿಳಿಸಲಾಗಿದೆ.

    ಇದನ್ನೂ ಓದಿ: ಸೆರಂ ಇನ್​ಸ್ಟಿಟ್ಯೂಟ್​ ಬೆಂಕಿ ಅವಘಡಕ್ಕೆ ಐದು ಬಲಿ; ಲಸಿಕೆಗೆ ತೊಂದರೆಯಾಗಿಲ್ಲ ಎಂದ ಸಂಸ್ಥೆ

    ಪುಣೆಯ ಮಂಜಿರಾ ಪ್ರದೇಶದಲ್ಲಿರುವ ಇನ್‌ಸ್ಟಿಟ್ಯೂಟ್​ನ ಟರ್ಮಿನಲ್ ಗೇಟ್-1 ಒಳಗಿನ SEZ-3 ಕಟ್ಟಡದ ನಾಲ್ಕನೇ ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಅಗ್ನಿಶಾಮಕ ದಳ ಮತ್ತು ಎನ್​ಡಿಆರ್​ಎಫ್​ ತಂಡ ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸುವುದರ ಜತೆ ಕಟ್ಟಡದ ಒಳಗಿದ್ದವರ ರಕ್ಷಣಾ ಕಾರ್ಯವನ್ನು ನಡೆಸಲಾಗಿತ್ತು. ನಿರ್ಮಾಣ ಹಂತದಲ್ಲಿದ್ದ ಕಟ್ಟಡವಾಗಿದ್ದರಿಂದ ಯಾವುದೇ ಲಸಿಕೆ ಅಲ್ಲಿರಲಿಲ್ಲ. ವೆಲ್ಡಿಂಗ್​​ ಮಾಡಲಾಗುತ್ತಿದ್ದು ಅದರಿಂದಲೇ ಬೆಂಕಿ ಹತ್ತಿರಬಹುದು ಎಂದು ಊಹಿಸಲಾಗಿತ್ತು.

    ಬೆಂಕಿ ನಂದಿಸಿ, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎನ್ನುವಷ್ಟರಲ್ಲಿ ಮತ್ತೊಂದು ಕಂಪಾರ್ಟ್​ಮೆಂಟ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಹೇಳಲಾಗಿದೆ. ಬೆಂಕಿ ನಂದಿಸುವ ಕಾರ್ಯ ಸಂಜೆಯೂ ಮುಂದುವರಿದಿದೆ.

    ಇದನ್ನೂ ಓದಿ: ಕರೊನಾ ಲಸಿಕೆ ಉತ್ಪಾದನಾ ಕೇಂದ್ರಕ್ಕೇ ಬೆಂಕಿ! ಪುಣೆಯ ಸೆರಂ ಇನ್​ಸ್ಟಿಟ್ಯೂಟ್​ನಲ್ಲಿ ಬೆಂಕಿ ಅವಘಡ

    ಅವಘಡದಲ್ಲಿ ಸಾವನ್ನಪ್ಪಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ. ಈ ಕುರಿತಾಗಿ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆದರ್ ಪೂನವಾಲ್ಲಾ ಮಾತನಾಡಿದ್ದು, “ದುಃಖಕರ ಸಂಗತಿ ನಡೆದಿದೆ. ಈ ಘಟನೆಯಲ್ಲಿ ದುರದೃಷ್ಟವಶಾತ್ ಕೆಲವು ಪ್ರಾಣಹಾನಿಯೂ ಆಗಿದೆ. ನಾವು ತುಂಬಾ ದುಃಖಿತರಾಗಿದ್ದೇವೆ ಮತ್ತು ಅಗಲಿದವರ ಕುಟುಂಬ ಸದಸ್ಯರಿಗೆ ನಮ್ಮ ಆಳವಾದ ಸಂತಾಪವನ್ನು ಸಲ್ಲಿಸುತ್ತೇವೆ” ಎಂದು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ನೀಡುವುದಾಗಿ ಸಂಸ್ಥೆ ತಿಳಿಸಿದೆ. (ಏಜನ್ಸೀಸ್​)

    ಅಂಗಡಿಯಿಂದ ಬರಲು ತಡವಾದುದಕ್ಕೆ ಮಗನನ್ನು ಬೆಂಕಿಹಚ್ಚಿ ಕೊಂದ ಪಾಪಿ ತಂದೆ!

    ಫ್ರೀ ಇನ್ನರ್​ವೇರ್​ ಆಫರ್​ಗೆ ಮರುಳಾದ ಯುವತಿ! ಮುಂದೇನಾಯ್ತು ಕೇಳಿದರೆ ಶಾಕ್​ ಆಗೋದು ಗ್ಯಾರಂಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts