More

    ಒಂದು ಗ್ಲಾಸ್ ಟೊಮೆಟೊ ಜ್ಯೂಸ್ ಬಗ್ಗೆ ನಿಮಗೆ ಗೊತ್ತಿಲ್ಲದ ರಹಸ್ಯಗಳಿವು…

    ಬೆಂಗಳೂರು: ತರಕಾರಿಗಳಲ್ಲಿ ಟೊಮೆಟೊ ಕೂಡ ಒಂದು. ಅಡುಗೆಯಲ್ಲಿ ಟೊಮೆಟೊ ಬಳಕೆ ಭಕ್ಷ್ಯಗಳಿಗೆ ರುಚಿ ನೀಡುತ್ತದೆ. ಟೊಮೆಟೊ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಹಲವು ರೀತಿಯ ಪೋಷಕಾಂಶಗಳಿವೆ. ಟೊಮೆಟೊ ರಸವನ್ನು ಸೇವಿಸುವುದು ದೇಹಕ್ಕೆ ತುಂಬಾ ಒಳ್ಳೆಯದು.

    ಟೊಮೆಟೊದಲ್ಲಿ ವಿಟಮಿನ್ ಸಿ ಹೇರಳವಾಗಿದೆ. ವಿಟಮಿನ್ ಎ, ವಿಟಮಿನ್ ಸಿ, ಪೊಟ್ಯಾಶಿಯಂ, ತಾಮ್ರ, ಮೆಗ್ನೀಷಿಯಂ, ಕಬ್ಬಿಣಾಂಶ ಮತ್ತು ಆ್ಯಂಟಿಆಕ್ಸಿಡೆಂಟ್ ಗಳು ಲಭ್ಯವಿವೆ. ಇದರಿಂದ ದೇಹವು ಆರೋಗ್ಯಕರವಾಗಿರುತ್ತದೆ.

    ಟೊಮೆಟೊ ಜ್ಯೂಸ್‌ ತಯಾರಿಸುವ ವಿಧಾನ : ಟೊಮೆಟೊ ತುಂಡುಗಳ ಜತೆ ತೆಂಗಿನ ತುರಿ ಮತ್ತು ಸಕ್ಕರೆಯನ್ನು ಸೇರಿಸಿ ಮಿಕ್ಸಿ ಜಾರ್‌ಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಈ ಟೊಮೆಟೊ, ಸಕ್ಕರೆ ಹಾಗೂ ತೆಂಗಿನ ತುರಿ ಮಿಶ್ರಣಕ್ಕೆ ಒಂದು ಕಪ್‌ ನೀರು ಸೇರಿಸಿ ಮತ್ತೆ ರುಬ್ಬಿಕೊಳ್ಳಿ. ಬಳಿಕ ಮಿಕ್ಸಿ ಜಾರ್‌ನಿಂದ ಹೊರ ತೆಗೆದು ಅಗತ್ಯವಿರುವಷ್ಟು ನೀರು ಹಾಗೂ ನಿಮ್ಮ ರುಚಿಗೆ ತಕ್ಕಷ್ಟು ಸಿಹಿ ಸೇರಿಸಿಕೊಳ್ಳಿ. ಬಳಿಕ ಒಂದು ಪಾತ್ರೆ ಹಾಗೂ ಜಾರು ಬಳಸಿ ಚೆನ್ನಾಗಿ ಸೋಸಿಕೊಂಡು ಜ್ಯೂಸ್‌ ಬೇರರ್ಪಡಿಸಿಕೊಳ್ಳಿ.

    ಟೊಮೆಟೊ ಜ್ಯೂಸ್ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಏಕೆಂದರೆ ಟೊಮೆಟೊ ರಸದಲ್ಲಿ ಹಲವು ರೀತಿಯ ಪೋಷಕಾಂಶಗಳು ಲಭ್ಯವಿವೆ.

    ಟೊಮೆಟೊ ಜ್ಯೂಸ್ ಕುಡಿಯುವುದರಿಂದ ಚರ್ಮದ ಕ್ಯಾನ್ಸರ್ ಬರದಂತೆ ತಡೆಯುತ್ತದೆ.

    ಟೊಮೆಟೊ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಬೇಕಾದಷ್ಟು ನಾರಿನಂಶವೂ ದೊರೆಯುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

    ಟೊಮೇಟೊ ಜ್ಯೂಸ್ ಅನ್ನು ಆಗಾಗ್ಗೆ ಸೇವಿಸುವುದರಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ತಡೆಯಬಹುದು. ಹೃದಯ ಆರೋಗ್ಯಕರವಾಗಿ ಕೆಲಸ ಮಾಡುತ್ತದೆ. ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

    ಗಮನಿಸಿ: ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ವಿವರಗಳನ್ನು ನಿಮಗೆ ಒದಗಿಸಲಾಗಿದೆ.

    ಮಲಗುವ ಮುನ್ನ ಒಂದೇ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?  ಇಲ್ಲಿದೆ ಅಗತ್ಯ ಮಾಹಿತಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts