More

    ಉಡುಪಿಯಲ್ಲಿ 144ಸೆಕ್ಷನ್, ಮದ್ಯ ನಿಷೇಧ

    ಉಡುಪಿ: ರಾಮಮಂದಿರ ನಿರ್ಮಾಣದ ಭೂಮಿಪೂಜೆ ಆ.5ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

    ನಿಷೇಧಾಜ್ಞೆ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಆ.4ರಂದು ರಾತ್ರಿ 8 ಗಂಟೆಯಿಂದ ಆ.6ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

    ಪಟಾಕಿ, ಸ್ಫೋಟಕ ಸಿಡಿಸುವುದು, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ‌್ಯಾಲಿ, ಸಾರ್ವಜನಿಕ ರಾಜಕೀಯ, ಸಭೆ-ಸಮಾರಂಭ, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ, ಸಂಭ್ರಮಾಚರಣೆ ನಿಷೇಧಿಸಿದೆ.

    ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪಟಾಕಿ ಮಾರಾಟ ಮಾಡುವ ಪರಾವನಿಗೆದಾರರು ಅಂಗಡಿ ಮುಚ್ಚುವುದು, ಮತ್ತು ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts