More

    ಶಿವಮೊಗ್ಗದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ, ಶಾಲಾ-ಕಾಲೇಜು ರಜೆ ಮುಂದುವರಿಕೆ..

    ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಆರೋಪಿಗಳಿಬ್ಬರನ್ನು ಶಿವಮೊಗ್ಗ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮತ್ತೊಂದೆಡೆ ಶಿವಮೊಗ್ಗದಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಕೂಡ ಮುಂದುವರಿಸಲಾಗಿದೆ.

    ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಖಾಸಿಫ್ ಹಾಗೂ ನದೀಮ್ ಎಂಬವರನ್ನು ಇಂದು ಸಂಜೆ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್​ಗೆ ಮನವಿ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ಸೇಡಿಗೆ ಬಲಿಯಾದನೇ ಹರ್ಷ?; ಆರು ವರ್ಷಗಳಿಂದಿತ್ತು ಹಗೆತನ..

    ಇನ್ನು ಶಿವಮೊಗ್ಗದಲ್ಲಿ ಈಗಾಗಲೇ ವಿಧಿಸಲಾಗಿರುವ ನಿಷೇಧಾಜ್ಞೆ ಇನ್ನೆರಡು ದಿನಗಳ ಕಾಲ ಮುಂದುವರಿಯಲಿರುವುದಾಗಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣದಿಂದ ಉಂಟಾದ ಗಲಾಟೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಿನಂತಿಸಿಕೊಂಡಿರುವುದರಿಂದ ಇನ್ನು 2 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಅಂದರೆ ಶುಕ್ರವಾರ ಬೆಳಗ್ಗೆ 6ರ ವರೆಗೂ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

    ಇದನ್ನೂ ಓದಿ: ಮಸೀದಿ-ಮಂದಿರಗಳ ಧ್ವನಿವರ್ಧಕದ ಶಬ್ದ ತಗ್ಗಿಸದಿದ್ದರೆ ಕಾನೂನುಕ್ರಮ: ಪೊಲೀಸ್ ಕಮಿಷನರ್

    ಮಾತ್ರವಲ್ಲ ಮುಂದಿನ 2 ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದ್ದು, ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಟರ್ ಮ್ಯಾಜಿಸ್ಟ್ರೇಟ್ ನೇಮಕ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts