More

    ಒಂದು ತಿಂಗಳ ಕಾಲ ಸೆಕ್ಷನ್​ 144 ಘೋಷಣೆ! ಏಪ್ರಿಲ್​ 22ರಿಂದಲೇ ಜಾರಿ

    ಜೈಪುರ: ದೇಶಾದ್ಯಂತ ಕರೊನಾ ಸೋಂಕು ಹರಡುವಿಕೆ ಹೆಚ್ಚಳವಾಗುತ್ತಿದೆ. ರಾಜಸ್ಥಾನದಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬರುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಅನುಸರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್​ 22ರಿಂದ ಮೇ 21ರವರೆಗೆ ರಾಜ್ಯಾದ್ಯಂತ ಸೆಕ್ಷನ್​ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

    ಸದ್ಯ ರಾಜ್ಯದಲ್ಲಿ ಲಾಕ್​ಡೌನ್​ ಮಾಡುವ ಅವಶ್ಯಕತೆ ಇಲ್ಲವೆಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದರೆ ಸೋಂಕಿನ ನಿಯಂತ್ರಣ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಸೆಕ್ಷನ್​ 144 ಜಾರಿಗೊಳಿಸಿರುವುದಾಗಿ ಅವರು ಹೇಳಿದ್ದಾರೆ. ಈ ಸಮಯದಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ. (ಏಜೆನ್ಸೀಸ್​)

    ದೇಶದಲ್ಲಿ 44 ಲಕ್ಷ ಡೋಸೇಜ್​ ಕರೊನಾ ಲಸಿಕೆ ವ್ಯರ್ಥ! ಆರ್​ಟಿಐನಲ್ಲಿ ಬಯಲಾಯ್ತು ವರದಿ

    ಲಾಕ್​ಡೌನ್​ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ! ರಾಜ್ಯ ಸರ್ಕಾರದಿಂದ ವರದಿ ಕೇಳಿದ ನ್ಯಾಯಾಲಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts