More

    ರಾಜಧಾನಿಯಲ್ಲಿ ಮೇ 24ರವರೆಗೆ ನಿಷೇಧಾಜ್ಞೆ ಜಾರಿ; ಉಲ್ಲಂಘಿಸಿದರೆ ಕಠಿಣ ಕ್ರಮ, ಕೇಸ್ ದಾಖಲು

    ಬೆಂಗಳೂರು: ಕರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ನಗರದಾದ್ಯಂತ ಮೇ 24ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಲಾಕ್‌ಡೌನ್ ಜಾರಿಯಾಗಿದ್ದರೂ ಕರೊನಾ ನಿಯಂತ್ರಣಕ್ಕೆ ಬಾರದೆ ಸೋಂಕಿತರ ಸಾವಿನ ಸಂಖ್ಯೆ ಇಳಿಮುಖವಾಗಿಲ್ಲ. ಹೀಗಾಗಿ ಜನರು ಗುಂಪು ಸೇರುವುದನ್ನು ತಡೆಯಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೇ 24ರ ವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಆದರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ವಿವರಿಸಲಾಗಿದೆ. ನಿಷೇಧಾಜ್ಞೆ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಎಲ್ಲರೂ ಅನಗತ್ಯವಾಗಿ ಓಡಾಟ ನಡೆಸದೆ ಮನೆಯಲ್ಲಿಯೇ ಇರಬೇಕು. ಎಲ್ಲರೂ ಕೋವಿಡ್ ಮಾರ್ಗಸೂಚಿ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಿಸಲು ಸಹಕರಿಸಬೇಕು ಎಂದು ತಿಳಿಸಿದ್ದಾರೆ.

    448 ವಾಹನ ಜಪ್ತಿ: ನಗರದಲ್ಲಿ ವಾಹನಗಳ ಓಡಾಟ ಕಡಿಮೆಯಾಗಿದ್ದು, ಗುರುವಾರ ಅನಗತ್ಯವಾಗಿ ರಸ್ತೆಗಿಳಿದ 429 ದ್ವಿಚಕ್ರವಾಹನ, 11 ಆಟೋ ರಿಕ್ಷಾ, 8 ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 448 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಒಟ್ಟು 12 ಪ್ರಕರಣ ದಾಖಲಾಗಿದೆ.

    ಕರೊನಾ ಲಸಿಕೆ ಹಾಕಿಸಿಕೊಳ್ಳಬೇಕಾ?; ಪೊಲೀಸ್ ಕಮಿಷನರ್ ಕಮಲ್ ಪಂತ್ ಏನು ಹೇಳಿದ್ದಾರೆ ನೋಡಿ..

    ನಟಿ ಸಂಜನಾ ಗಲ್ರಾನಿ ವಿರುದ್ಧ ಎಫ್ಐಆರ್; ವಿಸ್ಕಿ ಎರಚಿ ಹಲ್ಲೆ ನಡೆಸಿದ ಆರೋಪ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts