More

    ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಬದ್ಧ

    ಕೊಕಟನೂರ: ಅಥಣಿ ತಾಲೂಕಿನ ರೈತ ಕುಟುಂಬದ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕೃಷಿ ಮಹಾವಿದ್ಯಾಲಯ ಹಾಗೂ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಸೋಮವಾರ 1.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಅಪ್ಪಯ್ಯಸ್ವಾಮಿ ಸಮುದಾಯ ಭವನವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಿರ್ಮಾಣಗೊಂಡ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬರುವ ವರ್ಷದಿಂದ ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗುವುದು. ಕೃಷಿ ಮಹಾವಿದ್ಯಾಲಯ ಹಾಗೂ ಕೇಂದ್ರೀಯ ವಿದ್ಯಾಲಯ ನಿರ್ಮಾಣಕ್ಕೆ ಈಗಾಗಲೇ ಭೂಮಿ ಮಂಜೂರಾಗಿದ್ದು, ಮುಂಬರುವ ಬಜೆಟ್‌ನಲ್ಲಿ ಅನುದಾನಕ್ಕೆ ಅನುಮೋದನೆ ಪಡೆದು ಕಟ್ಟಡ ಕಾಮಗಾರಿ ಆರಂಭಿಸಲಾಗುವುದು ಎಂದರು. ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರು ರಾಜಕೀಯ ಮಾಡದೇ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರಿ ಅನುದಾನ ಸದುಪಯೋಗಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು. ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರೂ ಉತ್ತಮ ದಾರಿಯಲ್ಲಿ ಸಾಗಿ ಮಾದರಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ವೀರಭದ್ರೇಶ್ವರ ಶಿವಾಚಾರ್ಯರು ಮಾತನಾಡಿದರು. ವೀರೇಶ ದೇವರು, ಮೃತ್ಯುಂಜಯ ಸ್ವಾಮೀಜಿ, ಗಣೇಶ ಗುರೂಜಿ, ಯೋಗಾನಂದ ಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಮಹಾದೇವ ಬಿರಾದಾರ, ಆತ್ಮಾರಾಮ ಸ್ವಾಮೀಜಿ, ಸಿ.ಎಸ್.ನೇಮಗೌಡ, ಗಟಿವಾಳಪ್ಪ ಗುಡ್ಡಾಪುರ, ಎಸ್.ಎಲ್.ಪೂಜಾರಿ, ನೂರ್‌ಅಹ್ಮದ್ ಡೊಂಗರಗಾವ, ರಾಮು ಕುಂಬಾರ, ಅಪ್ಪಯ್ಯ ಸ್ವಾಮಿ ಟ್ರಸ್ಟ್ ಸಮಿತಿ ಅಧ್ಯಕ್ಷ ಸುನೀಲ ಝೇರೆ, ಶಾಮು ಕುಂಬಾರ, ಗುರುಬಸು ಬಂಡರಗೊಟ್ಟಿ, ಭೂಸೇನಾ ನಿಗಮದ ಎಇಇ ಷಣ್ಮುಖಪ್ಪ ವಿ., ಮಲ್ಲಿಕಾರ್ಜುನ ಕೆಂಪವಾಡ, ಸಹದೇವ ಸೂರ್ಯವಂಶಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts