20.3 C
Bangalore
Sunday, December 15, 2019

ಲೋಕಸಭೆಯಲ್ಲಿ ಭದ್ರತೆ ಗದ್ದಲ; ಸದನದಿಂದ ಹೊರನಡೆದ ಅಮಿತ್​ ಷಾ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್ ಹಾಗೂ ಪ್ರಿಯಾಂಕಾ ಅವರಿಗೆ ನೀಡಿದ ವಿಶೇಷ ಭದ್ರತಾ ದಳದ (ಎಸ್​ಪಿಜಿ) ಭದ್ರತೆಯನ್ನು ವಾಪಸ್ ಪಡೆದ ವಿಷಯ ಮಂಗಳವಾರ ಸಂಸತ್ತಿನಲ್ಲಿ ಗದ್ದಲ ಸೃಷ್ಟಿಸಿತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ವಿವರಣೆ ನೀಡುವಂತೆ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದಾಗ ಷಾ ಸದನದಿಂದ ಹೊರ ನಡೆದರು. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸಂಸದರು ಸಭಾತ್ಯಾಗ ಮಾಡಿದರು. ಇದಕ್ಕೂ ಮೊದಲು. ಸದನದಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಲ್ಲಿಸಿದ್ದ ನಿಲುವಳಿ ಗೊತ್ತುವಳಿಯನ್ನು ಸ್ಪೀಕರ್ ತಿರಸ್ಕರಿಸಿದರು. ಈ ಮಧ್ಯೆ, ಸೋನಿಯಾ ಗಾಂಧಿ ಮತ್ತು ಅವರ ಇಬ್ಬರು ಮಕ್ಕಳಿಗೆ ಝುಡ್ ಪ್ಲಸ್ ಶ್ರೇಣಿ ಕಲ್ಪಿಸಲು ಗೃಹ ಸಚಿವಾಲಯದ ಆದೇಶವಾಗಿರುವುದರಿಂದ, ಭದ್ರತೆಗೆ ಅಗತ್ಯ ಸಿಬ್ಬಂದಿ ಲಭ್ಯವಿರುವ ಬಗ್ಗೆ ಮಾಹಿತಿ ನೀಡುವಂತೆ ಸಿಆರ್​ಪಿಎಫ್ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ಸಂಸತ್ತಿಗೆ ಸರ್ಕಾರ ನೀಡಿದ ಮಾಹಿತಿ

  1. ಪ್ರಸಕ್ತ ವರ್ಷದ ಮುಂಗಾರು ವೇಳೆ ಉಂಟಾದ ಭಾರಿ ಮಳೆ ಮತ್ತು ಪ್ರವಾಹದಿಂದ ದೇಶಾದ್ಯಂತ 2391 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಲ್ಲಿ ಸಿಲುಕ್ಕಿದ್ದ 98,962 ಜನರು ಹಾಗೂ 617 ಜಾನುವಾರುಗಳನ್ನು ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ.
  2. ಸಂವಿಧಾನದ 370ನೇ ವಿಧಿ ರದ್ದುಪಡಿಸಿದಾಗಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ಆರೋಪದ ಮೇಲೆ 765 ಜನರನ್ನು ಬಂಧಿಸಲಾಗಿದೆ.
  3. ಪ್ರಸಕ್ತ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳಿಗೆ -ಠಿ; 95,700 ಕೋಟಿ ವಂಚನೆಯಾಗಿದೆ.
  4. ಕಳೆದ ಐದು ದಶಕಗಳಲ್ಲಿ ಭಾರತದ ಕರಾವಳಿಯಲ್ಲಿ ಸಮುದ್ರ ಮಟ್ಟ 8.5 ಸೆಂ.ಮೀಟರ್ ಏರಿಕೆಯಾಗಿದೆ.
  5. ಜಲಿಯನ್​ವಾಲಾಬಾಗ್ ರಾಷ್ಟ್ರೀಯ ಸ್ಮಾರಕ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅನುಮೋದನೆ.

ರಾಹುಲ್ ಗೈರು

ಕಾಂಗ್ರೆಸ್ ಸದಸ್ಯ ರಾಹುಲ್ ಗಾಂಧಿ ಸದನದಲ್ಲಿ ಗೈರಾಗಿದ್ದನ್ನು ಗಮನಿಸಿದ ಸ್ಪೀಕರ್ ಓಂ ಬಿರ್ಲಾ, ರಾಹುಲ್ ಕೇಳಿದ ಪ್ರಶ್ನೆಯೂ ಪಟ್ಟಿಯಲ್ಲಿ ಸೇರಿದೆ. ಅವರು ಹಾಜ ರಿದ್ದರೆ ಅವರಿಗೆ ಅವಕಾಶ ನೀಡುತ್ತಿದ್ದೆ ಎಂದರು.

ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಸದಸ್ಯರು ಸ್ಪೀಕರ್ ಪೀಠದ ಮುಂದಿನ ಅಂಗಳಕ್ಕೆ ಧಾವಿಸಿ ಘೋಷಣೆಗಳನ್ನು ಕೂಗಲಾರಂಭಿಸಿದರು. ರೈತರಿಗೆ ಸಂಬಂಧಿಸಿದ ಪ್ರಶ್ನೆ ಇರುವುದರಿಂದ ಆಸನಗಳಿಗೆ ಮರಳುವಂತೆ ಸ್ಪೀಕರ್ ಓಂ ಬಿರ್ಲಾ ಪದೇ ಪದೆ ಮಾಡಿಕೊಂಡ ಮನವಿಗೆ ಸ್ಪಂದನೆ ಸಿಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಅವರು, ಇನ್ನು ಮುಂದೆ ಸದನದ ಅಂಗಳಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರೆ ಕ್ರಮಕೈಗೊಳ್ಳಲಾಗುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.

ಜೆಎನ್​ಯುು ಪ್ರತಿಧ್ವನಿ

ಹಾಸ್ಟೆಲ್ ಶುಲ್ಕ ಏರಿಕೆ ವಿರುದ್ಧ ಚಳವಳಿ ನಡೆಸುತ್ತಿರುವ ಜೆಎನ್​ಯುು ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಮಂಗಳವಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಜನತಾಂತ್ರಿಕ ಚಳವಳಿಯನ್ನು ಮೋದಿ ಸರ್ಕಾರ ಮತ್ತು ಜೆಎನ್​ಯುು ಆಡಳಿತ ದಮನಿಸುತ್ತಿವೆ ಎಂದು ಪ್ರತಿಪಕ್ಷಗಳು ಆರೋಪಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಗಿರಿರಾಜ್ ಸಿಂಗ್, ಜೆಎನ್​ಯುುವನ್ನು ನಗರ ನಕ್ಸಲರ ಕೇಂದ್ರವನ್ನಾಗಿ ಮಾಡಲಾಗುತ್ತಿದೆ ಎಂದರು. ಇದನ್ನು ಬಿಜೆಪಿ ಸದಸ್ಯರು ಬೆಂಬಲಿಸಿದರು. ಈ ಮಧ್ಯೆ, ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಜೆಎನ್​ಯುು ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಎರಡು ಎಫ್​ಐಆರ್ ದಾಖಲಿಸಿದ್ದಾರೆ.

ಫೋನ್ ಕದ್ದಾಲಿಕೆ ಅಧಿಕಾರ

10 ಸಂಸ್ಥೆಗಳಿಗೆ ಮಾತ್ರ ಫೋನ್ ಕದ್ದಾಲಿಸುವ ಅಧಿಕಾರವಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದರು. ವಾಟ್ಸ್​ಆಪ್ ಕರೆ, ಫೇಸ್​ಬುಕ್, ವೈಬ್ ಮತ್ತು ಗೂಗಲ್ ಸಂದೇಶಗಳ ಕದ್ದಾಲಿಕೆಗೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಾತ್ರ ಡಿಜಿಟಲ್ ಮಾಹಿತಿಯನ್ನು ಅನುಮತಿ ಇಲ್ಲದೆ ಪಡೆಯಲು, ನಿಗಾವಹಿಸಲು ಮತ್ತು ಡಿಕ್ರಿಪ್ಟ್ ಮಾಡಲು ಅವಕಾಶ ಇದೆ ಎಂದು ಸಚಿವರು ತಿಳಿಸಿದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...