ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆಗಳು| Operation Mahadev

army
Published on

Operation Mahadev: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಳಿ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಭಾರತೀಯ ಸೇನೆ ಹೇಳಿದೆ.

ಶ್ರೀನಗರದ ಡಚಿಗಾಮ್ ಪಾರ್ಕ್​ ಬಳಿಯ ಹರ್ವಾನ್ ಪ್ರದೇಶದಲ್ಲಿ ಉಗ್ರರು ತಂಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.

ಹರ್ವಾನ್ ಪ್ರದೇಶದಲ್ಲಿ ಸೇನೆ, ಸಿಆರ್​ಪಿಎಫ್​ ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಉಗ್ರರ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಭಾರತೀಯ ಸೇನೆ ಚಿನಾರ್ ಕಾರ್ಪ್ಸ್​ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ನೀಡಿದೆ.

ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ಮಾಡಿ 26 ಅಮಾಯಕ ಜನರನ್ನು ಗುಂಡಿಟ್ಟು ಕೊಂದಿದ್ದರು. ಬಳಿಕ ಪಾಕ್​ ಉಗ್ರರ ಕ್ಯಾಂಪ್​ಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ  9 ಸ್ಥಳಗಳನ್ನು ಉಡಾಯಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಯಿಂದ ಆಪರೇಷನ್ ಮಹಾದೇವ ಆರಂಭಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net