More

    ಬೆಂಗಳೂರಿನಲ್ಲಿ ಭದ್ರತಾ ಲೋಪ: ಮೋದಿಗೆ ಚೊಂಬು ಪ್ರದರ್ಶಿಸಲು ಬಂದ ನಲಪಾಡ್​

    ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚೊಂಬು ತೋರಿಸಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡ ಮೊಹಮದ್‌ ನಲಪಾಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

    ಇದನ್ನೂ ಓದಿ: ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್​​ರನ್ನು ನಿಧಾನಗತಿ ಸಾವಿನತ್ತ ತಳ್ಳಲಾಗ್ತಿದೆ: ಎಎಪಿ ಆರೋಪ

    ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ವೇಳೆ ಮೋದಿಗೆ ಭದ್ರತಾ ಲೋಪ ಉಂಟಾಗಿದೆ.

    ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪವಾಗಿದೆ. ನರೇಂದ್ರ ಮೋದಿ ಅವರು ಬಿಜೆಪಿ-ಜೆಡಿಎಸ್​ ಮೈತ್ರಿ ಸಮಾವೇಶಕ್ಕೆಂದು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ಮೊಹಮ್ಮದ್​ ನಲಪಾಡ್, ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

    ಈ ವೇಳೆ ನಲಪಾಡ್ ಸೇರಿದಂತೆ ಇಬ್ಬರು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ನಲಪಾಡ್‌ ಚೊಂಬು ಪ್ರದರ್ಶನ ಮಾಡೋದು ತಪ್ಪಾ ಅಂತಾ ಆಕ್ರೋಶ ಹೊರಹಾಕಿದ್ರು.

    ನರೇಂದ್ರ ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಅರ್ಧಗಂಟೆ ಮುಂಚೆಯೇ ಬಂದಿದ್ದ ನಲಪಾಡ್‌ ನಂಬರ್‌ ಇಲ್ಲದ ಕಾರಿನಲ್ಲಿ ಕಾದು ಕುಳಿತಿದ್ದರು. ಕಪ್ಪು ಬಣ್ಣದ ಲ್ಯಾಂಡ್ರೋವರ್ ಡಿಫೆಂಡರ್ ಕಾರಿನಲ್ಲಿ ನಲಪಾಡ್‌ ಜೊತೆಗೆ ಎಂಟು ಜನ ಇದ್ದರು. ಮೋದಿ ತೆರಳುವ ಸಂದರ್ಭದಲ್ಲೇ ಚೊಂಬು ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಚುನಾವಣೆ ಬಳಿಕ ವಯನಾಡ್​ನಿಂದಲೂ ರಾಹುಲ್ ಗಾಂಧಿ ಪಲಾಯನ: ಪ್ರಧಾನಿ ಮೋದಿ ವ್ಯಂಗ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts