More

    ಇಂದಿರಾ ಅನ್ನಪೂರ್ಣೇಶ್ವರಿ ಆದರೆ ತಪ್ಪೇನಿದೆ : ಸಿ.ಟಿ.ರವಿ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸುಧಾಕರ್

    ಚಿಕ್ಕಬಳ್ಳಾಪುರ: ಅನ್ನಪೂರ್ಣೇಶ್ವರಿ ಕ್ಯಾಂಟಿನ್ ಎಂಬುದಾಗಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವುದರಲ್ಲಿ ತಪ್ಪೇನಿದೆ? ಎಲ್ಲರಿಗೂ ತಾಯಿ ಅನ್ನಪೂರ್ಣೇಶ್ವರಿ ಎನ್ನುವ ಮೂಲಕ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಸಮರ್ಥಿಸಿಕೊಂಡಿದ್ದಾರೆ.

    ನಂದಿ ಗಿರಿಧಾಮದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ಭಾನುವಾರ ಕೈಗೊಂಡಿದ್ದ ಸೀಡ್‌ಬಾಲ್ ಮತ್ತು ಸಸಿ ನೆಡುವ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವರು, ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಇದರ ಬಗ್ಗೆ ಕೇವಲ ಚರ್ಚೆಯಾಗುತ್ತಿದೆ ಎಂದರು.

    ಖಾತೆ ಹಂಚಿಕೆಯ ವಿಚಾರದಲ್ಲಿ ಕೆಲವರಿಗೆ ಅಸಮಾಧಾನವಾಗಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೋಡಿಕೊಳ್ಳಲಿದ್ದಾರೆ. ಈಗಾಗಲೇ ಸಂಬಂಧಪಟ್ಟವರನ್ನು ಕರೆಸಿ, ಮಾತನಾಡುವುದಾಗಿ ಸ್ವತಃ ಅವರೇ ಹೇಳಿದ್ದಾರೆ ಎಂದರು. ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ಸಿ.ಎಸ್.ಮಂಜುನಾಥ್, ಲೀಲಾವತಿ ಶ್ರೀನಿವಾಸ್ ಮತ್ತಿತರರು ಇದ್ದರು.

    ಆಕರ್ಷಕ ತಾಣವಾಗಿಸಲು ಶ್ರಮ: ನಂದಿ ಗಿರಿಧಾಮದ ಅಭಿವೃದ್ಧಿ ವಿಚಾರವಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿ, ಮತ್ತಷ್ಟು ಆಕರ್ಷಕ ಪ್ರವಾಸಿ ತಾಣವನ್ನಾಗಿಸಲು ಶ್ರಮಿಸಲಾಗುತ್ತಿದೆ ಎಂದು ಡಾ ಕೆ.ಸುಧಾಕರ್ ತಿಳಿಸಿದರು. ಕರೊನಾ ಸೋಂಕಿನ ನಿಯಂತ್ರಣ, ಪರಿಸರ ಸಂರಕ್ಷಣೆ ಸೇರಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts