More

    ಸೀಮಾಂಧ್ರದಿಂದ ವಲಸಿಗರ ಆಗಮನ, ಜೋಳದರಾಶಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ, ಸ್ಥಳೀಯರಿಗೆ ಕ್ವಾರಂಟೈನ್

    ಬಳ್ಳಾರಿ: ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧೆಡೆ ಸಿಲುಕಿದ್ದ ವಲಸೆ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಹಾಗೂ ಇತರರಿಗೆ ತಾಲೂಕಿನ ಜೋಳದರಾಶಿ ಚೆಕ್‌ಪೋಸ್ಟ್ ಮೂಲಕ ಆಗಮಿಸಲು ಅವಕಾಶ ಕಲ್ಪಿಸಲಾಗಿದೆ.

    ಚೆಕ್‌ಪೋಸ್ಟ್‌ಗೆ ಆಗಮಿಸುವ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜಿಲ್ಲೆಯವರಾಗಿದ್ದರೆ ಕೈಗೆ ಸೀಲ್ ಹಾಕಿ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತಿದೆ. ಅನ್ಯ ಜಿಲ್ಲೆಯವರನ್ನು ಭದ್ರತೆ ಮೂಲಕ ಆಯಾ ಜಿಲ್ಲೆಗಳ ಗಡಿಗೆ ತಲುಪಿಸಲಾಗುತ್ತಿದೆ. ಪ್ರತಿ ವಾಹನವನ್ನು ತಪಾಸಣೆ ನಡೆಸಲಾಗುತ್ತಿದ್ದು, ಪಾಸ್ ಪಡೆದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತಿದೆ. ಆಂಧ್ರಪ್ರದೇಶದ ಗುಂಟೂರು, ಚಿತ್ತೂರು ಹಾಗೂ ಅನಂತಪುರ ಜಿಲ್ಲೆಗಳಿಂದ 130 ಜನರು ಜಿಲ್ಲೆಗೆ ಆಗಮಿಸಿದ್ದಾರೆ.

    ಸ್ಕ್ರೀನಿಂಗ್ ಕೇಂದ್ರದಲ್ಲಿ 50 ಸಿಬ್ಬಂದಿ ಪಾಳಿ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಕ್ರೀನಿಂಗ್ ಜವಾಬ್ದಾರಿ ಹೊತ್ತಿದ್ದರೆ ಇತರ ವಿವಿಧ ಇಲಾಖೆಗಳ ಸಿಬ್ಬಂದಿ ವಲಸಿಗರ ಮಾಹಿತಿ ದಾಖಲಿಸಿಕೊಳ್ಳುತ್ತಿದ್ದಾರೆ.

    ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ದೆಹಲಿ, ತಮಿಳುನಾಡು ಹೈ ರಿಸ್ಕ್ ರಾಜ್ಯಗಳೆಂದು ಗುರುತಿಸಲಾಗಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಪಂಜಾಬ್, ತೆಲಂಗಾಣವನ್ನು ಮಧ್ಯಮ ವಲಯದ ರಿಸ್ಕ್ ಇರುವ ರಾಜ್ಯಗಳು ಹಾಗೂ ಇತರ ರಾಜ್ಯಗಳನ್ನು ಕಡಿಮೆ ರಿಸ್ಕ್ ಪ್ರದೇಶಗಳೆಂದು ಗುರುತಿಸಲಾಗಿದೆ. ಮೂರು ವಲಯದಿಂದ ಆಗಮಿಸುವ ಜನರಿಗೆ ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ತಾತ್ಕಾಲಿಕ ಊಟ ಹಾಗೂ ವಸತಿ ಸೌಕರ್ಯ ಕಲ್ಪಿಸಲಾಗುತ್ತಿದೆ. ಈ ಹಾಸ್ಟೆಲ್‌ಗಳ ಉಸ್ತುವಾರಿಗೆ ವಿವಿಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲ ಹಾಸ್ಟೆಲ್‌ಗಳಿಗೆ ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts