More

    ಶ್ರೀರಂಗಪಟ್ಟಣದಲ್ಲಿ ಸೀಮಂತ, ಆರೋಗ್ಯ ಜಾಗೃತಿ ಕಾರ್ಯಕ್ರಮ

    ಶ್ರೀರಂಗಪಟ್ಟಣ: ಪಾಲಕರಿಂದ ಮಗುವಿಗೆ ಹರಡುವ ಸೋಂಕಿನ ತಡೆಗಾಗಿ ಹಾಗೂ ಸುರಕ್ಷಿತ ತಾಯ್ತನಕ್ಕಾಗಿ ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಹೇಳಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸೀಮಂತ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಗರ್ಭಿಣಿಯರು ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ ಮಾಡಿಸಿಕೊಂಡು ಎಚ್‌ಐವಿ ಮುಕ್ತ ಮಗುವಿನ ಜನನ ಹಾಗೂ ಎಚ್‌ಐವಿ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸಹಕರಿಸಬೇಕು ಎಂದು ಸಲಹೆ ನೀಡಿದರು.

    ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ಐಸಿಟಿಸಿ ಕೇಂದ್ರಗಳಲ್ಲಿ ಆಪ್ತ ಸಮಾಲೋಚನೆ, ಪರೀಕ್ಷೆ, ಸಲಹೆ ಮತ್ತು ಸೇವೆಗಳು ಉಚಿತವಾಗಿ ದೊರೆಯುತ್ತವೆ. ಗರ್ಭಿಣಿಯರು ನೋಂದಣಿ ಮಾಡಿಸಿ ಮೊದಲ ತ್ರೈಮಾಸಿಕ ಅವಧಿಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಗರ್ಭಾವಸ್ಥೆಯಲ್ಲಿ ಸೋಂಕಿತರಾಗಿದ್ದಲ್ಲಿ ಮುಂಜಾಗ್ರತೆ ವಹಿಸಿ ಮಗುವಿಗೆ ಸೋಂಕು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಸಲಹೆ ನೀಡಿದರು.

    ಹೆಪಟೈಟಿಸ್ ಹಾಗೂ ಸಿಪಿಲಿಸ್ ಮುಂಜಾಗ್ರತಾ ಕ್ರಮಗಳ ಕುರಿತು ವೈದ್ಯಾಧಿಕಾರಿ ಡಾ.ಚಂದ್ರಿಕಾ ಮಾಹಿತಿ ನೀಡಿದರು. ಆಪ್ತ ಸಮಾಲೋಚಕಿ ಮಿಲನ್, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳಾ ಮಾತನಾಡಿದರು.

    ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ಯುವಜನ ಮತ್ತು ಅಭಿವೃದ್ಧಿ ಸಂಸ್ಥೆಯ ಸಂಪರ್ಕ ಕಾರ್ಯಕರ್ತೆ ನಾಗಮ್ಮ, ಆಶಾ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು. ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ 40 ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ ನೆರವೇರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts