More

    ದೇಶ ಕಂಡ ಅಪ್ರತಿಮ ರಾಜಕಾರಣಿ ಬಾಬೂಜಿ

    ಕೂಡ್ಲಿಗಿ: ವಿದ್ಯಾರ್ಥಿ ದೆಸೆಯಲ್ಲಿಯೇ ಡಾ.ಬಾಬು ಜಗಜೀವನ ರಾಮ್ ಹರಿಜನ, ಗಿರಿಜನ ಮಕ್ಕಳಿಗೆ ಪುಸ್ತಕ, ಪೆನ್ನು ಹಾಗೂ ಶಾಲೆಯ ದಾಖಲಾತಿ ಶುಲ್ಕವನ್ನು ಸಹ ಕಟ್ಟುತ್ತಿದ್ದರು ಎಂದು ದಸಂಸ ಜಿಲ್ಲಾ ಸಂಚಾಲಕ ಎಸ್.ದುರುಗೇಶ್ ಹೇಳಿದರು.

    ಪಟ್ಟಣದ ತಾಲೂಕು ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಜಗಜೀವನರಾಮ್ ದೇಶ ಕಂಡ ಅಪ್ರತಿಮ ರಾಜಕಾರಣಿ, ಸರಳ, ಸಜ್ಜನಿಕೆ ಹೆಸರಾಗಿದ್ದರು. ರೈಲ್ವೆ ಮಂತ್ರಿ ಆಗಿದ್ದಾಗ ಅಲ್ಲಿಯೂ ತಳ ಸಮುದಾಯಕ್ಕೆ ಸೇರಿದ ಜನರಿಗೆ ಉದ್ಯೋಗ ನೀಡಿದರು. ಅಸ್ಪಶ್ಯತೆ ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರವಾಗಿದೆ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದೇ ಇದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಕೃಷಿಯಲ್ಲಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದರು.

    ಡಾ.ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಗುಣಸಾಗರ ಕೃಷ್ಣಪ್ಪ, ಬಾಬು ಜಗಜೀವನ ರಾಮ್ ಸಂಘದ ತಾಲೂಕು ಅಧ್ಯಕ್ಷ ಸಾಸಲವಾಡ ಶಿವಣ್ಣ ಮಾತನಾಡಿದರು. ತಹಸೀಲ್ದಾರ್ ರಾಜು ಪಿರಂಗಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಇಒ ವೈ.ರವಿ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ದಿಡಗೂರ್, ದಲಿತ ಸಂಘಟನೆಯ ಬಂಡೆ ರಾಘವೇಂದ್ರ, ಶಿವರಾಜ್,ಪರಶುರಾಮ, ಜಿಪಂ ಎಇಇ ಮಲ್ಲಿಕಾರ್ಜುನ, ಎಸ್ಟಿ ಅಧಿಕಾರಿ ಮೆಹಬೂಬ್ ಬಾಷಾ ಅರಸೀಕೆರೆ, ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ.ಎಂ.ವೀರಯ್ಯ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts