22.8 C
Bengaluru
Saturday, January 18, 2020

ವಿವಾಹ ವಾರ್ಷಿಕೋತ್ಸವವನ್ನು ವಿಭಿನ್ನವಾಗಿ ಆಚರಿಸಿಕೊಂಡ ಮಹಿಳೆ; ತನ್ನ ಜೀವನ ಲೆಕ್ಕಿಸದೆ ಯುವಕನಿಗೆ ಮರುಜನ್ಮ ನೀಡಿದ ತಾಯಿ ಈಕೆ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಕೊಚ್ಚಿ: ಈ ಮಹಿಳೆಗೆ 47 ವರ್ಷ. ಇಬ್ಬರು ಹೆಣ್ಣುಮಕ್ಕಳ ತಾಯಿ. ಪತಿ ಗಲ್ಫ್​ನಲ್ಲಿ ಕೆಲಸ ಮಾಡುತ್ತಾರೆ. ಹೆಸರು ಸೀತಾ. ತಮ್ಮ 23ನೇ ವಿವಾಹ ವಾರ್ಷಿಕೋತ್ಸವದ ದಿನ ಒಂದು ಅದ್ಭುತ ಕೆಲಸ ಮಾಡುವ ಮೂಲಕ ಅನೇಕ ಜನರ ಹೃದಯ ಗೆದ್ದಿದ್ದಾರೆ.

ಕೊಟ್ಟಾಯಂ ನೀರಿಕ್ಕಡ್​ನ ನಿವಾಸಿಯಾಗಿರುವ ಸೀತಾ ಥಾಂಪಿ ಅವರು ತಮ್ಮ ವಿವಾಹ ವಾರ್ಷಿಕೋತ್ಸವದ ದಿನ ತಂದೆ-ತಾಯಿ ಇಲ್ಲದ ಯುವಕನೋರ್ವನಿಗೆ ಒಂದು ಕಿಡ್ನಿಯನ್ನು ದಾನ ಮಾಡಿ ಆತನ ಜೀವ ಉಳಿಸಿದ್ದಾರೆ.

19 ವರ್ಷದ ಯುವಕ ಜಯಕೃಷ್ಣನ್​ ಅವರು ಸೀತಾ ಅವರಿಂದ ಮರುಜನ್ಮ ಪಡೆದಿದ್ದಾರೆ. ಎರ್ನಾಕ್ಕುಲಂನ ಮೆಡಿಕಲ್​ ಟ್ರಸ್ಟ್​ ಆಸ್ಪತ್ರೆಯಲ್ಲಿ ಮಂಗಳವಾರ ಈ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ.

ಸೀತಾ ಅವರು ಪಾಲಕ್ಕಾಡ್‌ನ ಪೆರಿಂಗೊಟುಕುರಿಸ್ಸಿ ಮೂಲದ ದಯಾ ಚಾರಿಟೇಬಲ್ ಟ್ರಸ್ಟ್‌ನ ನಿರ್ವಾಹಕ ಸದಸ್ಯೆ. ಜಯಕೃಷ್ಣನ್ 19 ವರ್ಷದವನಾಗಿದ್ದು ಕಂಪ್ಯೂಟರ್​ ಕೋರ್ಸ್​ ಮಾಡುತ್ತಿದ್ದ. ​ ಚಿಕ್ಕವಯಸ್ಸಿನಲ್ಲಿಯೇ ತಂದೆ-ತಾಯಿಯನ್ನು ಕಳೆದುಕೊಂಡ ಜಯಕೃಷ್ಣನ್​ಗೆ ಎರಡೂ ಕಿಡ್ನಿಗಳಲ್ಲೂ ಸಮಸ್ಯೆಯಿತ್ತು. ವಾರದಲ್ಲಿ ಮೂರು ಬಾರಿ ಡಯಾಲಿಸಿಸ್​ ಮಾಡಬೇಕಿತ್ತು. ಆತನನ್ನು ಕರೆದುಕೊಂಡು ಸಹಾಯ ಕೇಳಲೆಂದು ಅವನ ಅಜ್ಜಿ ಹಾಗೂ ಅವಿವಾಹಿತ ಅತ್ತೆ ಈ ಸೀತಾ ಅವರು ಕೆಲಸ ಮಾಡುತ್ತಿದ್ದ ಟ್ರಸ್ಟ್​ಗೆ ಬಂದಿದ್ದರು.

ಚಾರಿಟೆಬಲ್​ ಟ್ರಸ್ಟ್​ ಅಧಿಕಾರಿಗಳು ಯುವಕನನ್ನು ನೋಡಿ ಹೇಗಾದರೂ ಸರಿ ಆತನಿಗೆ ಸಹಾಯ ಮಾಡಬೇಕು ಎಂದು ತೀರ್ಮಾನಕ್ಕೆ ಬಂದರು. ನಾನು ನನ್ನ ಅಜ್ಜಿ ಹಾಗೂ ಅತ್ತೆ ಇರುವವರೆಗೂ ಬದುಕಿರಬೇಕು. ಕಾರಣ ಅವರನ್ನು ನೋಡಿಕೊಳ್ಳಲು ಯಾರೂ ಇಲ್ಲ. ಅವರ ಸಹಾಯಕ್ಕೆ ಬರುವವರೂ ಯಾರೂ ಇಲ್ಲ ಎಂದು ಜಯಕೃಷ್ಣನ್​ ಟ್ರಸ್ಟ್ ಸಿಬ್ಬಂದಿಯ ಬಳಿ ಬೇಡಿಕೊಂಡರು.

ಒಂದೇ ದಿನದಲ್ಲಿ 15 ಲಕ್ಷ ರೂಪಾಯಿ ಸಂಗ್ರಹಿಸಿ ಸರ್ಜರಿಗಾಗಿ ನೀಡಿದರು. ಆದರೆ ಕಿಡ್ನಿ ದಾನ ಮಾಡುವವರು ಯಾರು ಎಂಬ ಪ್ರಶ್ನೆ ಬಂದಾಗ ಸೀತಾ ಥಾಂಪಿ ಮುಂದೆ ಬಂದರು. ನಾನೇ ಕಿಡ್ನಿ ಕೊಡುತ್ತೇನೆ ಎಂದು ಹೇಳಿದರು. ಟೆಸ್ಟ್​ಗಳನ್ನು ಮಾಡಿದಾಗ ಸೀತಾ ಅವರ ರಕ್ತದ ಗುಂಪು ಯುವಕನಿಗೆ ಸರಿಹೊಂದುತ್ತಿತ್ತು. ಕಿಡ್ನಿ ಕಸಿ ಮಾಡಬಹುದು ಎಂದು ವೈದ್ಯರೂ ವರದಿ ನೀಡಿದರು. ಈ ವೇಳೆ ಹಲವರು ಕಿಡ್ನಿ ಕೊಡಬೇಡ ಎಂದು ಸಲಹೆ ನೀಡಿದರೂ ಮನಸು ಬದಲಿಸದ ಸೀತಾ ಅಚಲ ನಿರ್ಧಾರ ಮಾಡಿದರು.

ಆಕೆಯ ಪತಿ ದಿಲೀಪ್​ ಪಾಂಥಿ ಕೂಡ ಇದಕ್ಕೆ ಒಪ್ಪಿಗೆ ನೀಡಿ, ಖುದ್ದಾಗಿ ಬಂದು ಸರ್ಜರಿಗೆ ಸಂಬಂಧಪಟ್ಟ ದಾಖಲೆಗಳಿಗೆ ಸಹಿ ಮಾಡಿದರು. ಅದಾದ ಬಳಿಕ ಜಯಕೃಷ್ಣ ಹಾಗೂ ಸೀತಾ ಇಬ್ಬರನ್ನೂ ಆಸ್ಪತ್ರೆಗೆ ಅಡ್ಮಿಟ್ ಮಾಡಿ, ಭಾನುವಾರ ಇಬ್ಬರಿಗೂ ಸರ್ಜರಿ ನಡೆದಿದೆ. ಇವರಿಬ್ಬರೂ ಆರೋಗ್ಯವಾಗಿದ್ದಾರೆ.

ದಯಾ ಚಾರಿಟೆಬಲ್​ ಟ್ರಸ್ಟ್​ನ ಚೇರ್ಮನ್​ ಇ.ಬಿ.ರಮೇಶ್​ ಅವರು, ಜಯಕೃಷ್ಣನ್​ ಅವರ ಕುಟುಂಬಕ್ಕೆ ಒಂದು ಮನೆ ಕಟ್ಟಿಸಿಕೊಡುವ ಯೋಜನೆಯೂ ಇದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...