ಲೆಜೆಂಡ್ಸ್ ಲೀಗ್ ಟಿ20 ಕ್ರಿಕೆಟ್ ಟೂರ್ನಿ; ಇಂಡಿಯಾ ಮಹಾರಾಜ ತಂಡಕ್ಕೆ ವೀರೇಂದ್ರ ಸೆಹ್ವಾಗ್ ಸಾರಥ್ಯ

virendra sehwag for web
Published on

ಮಸ್ಕತ್: ಭಾರತ ತಂಡದ ಮಾಜಿ ಸ್ಫೋಟಕ ಆರಂಭಿಕ ವೀರೇಂದ್ರ ಸೆಹ್ವಾಗ್, ಗುರುವಾರ ಆರಂಭವಾಗಲಿರುವ ಲೆಜೆಂಡ್ಸ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಇಂಡಿಯಾ ಮಹಾರಾಜ ತಂಡವನ್ನು ಮುನ್ನಡೆಸಲಿದ್ದಾರೆ. ವೀರೇಂದ್ರ ಸೆಹ್ವಾಗ್ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಅಂದು ಡೆಲ್ಲಿ ಡೇರ್‌ಡೆವಿಲ್ಸ್), ಪಂಜಾಬ್ ಕಿಂಗ್ಸ್ (ಅಂದು ಕಿಂಗ್ಸ್ ಇಲೆವೆನ್ ಪಂಜಾಬ್) ತಂಡಗಳಿಗೆ ನಾಯಕನಾದ ಅನುಭವ ಹೊಂದಿದ್ದಾರೆ. ಮೊಹಮದ್ ಕೈಫ್ ತಂಡದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯಾದ ಜಾನ್ ಬುಕಾನನ್ ಅವರನ್ನು ತಂಡದ ಕೋಚ್ ಆಗಿ ನೇಮಿಸಲಾಗಿದೆ.

ಪಾಕಿಸ್ತಾನದ ಮಾಜಿ ಬ್ಯಾಟರ್ ಮಿಸ್ಬಾ ಉಲ್ ಹಕ್ ಅವರನ್ನು ಏಷ್ಯಾ ಲಯನ್ಸ್ ತಂಡದ ನಾಯಕನಾಗಿ ನೇಮಿಸಲಾಗಿದೆ. ತಿಲಕರತ್ನೆ ದಿಲ್ಶಾನ್ ಉಪನಾಯಕನಾಗಿ ಆಯ್ಕೆಯಾದರೆ, ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗ ತಂಡದ ಕೋಚ್ ಆಗಿರಲಿದ್ದಾರೆ. ವೆಸ್ಟ್ ಇಂಡೀಸ್ ತಂಡದ ಮಾಜಿ ನಾಯಕ ಡರೇನ್ ಸ್ಯಾಮ್ಮಿ ವರ್ಲ್ಡ್ ಜೈಂಟ್ಸ್ ತಂಡದ ನಾಯಕನಾಗಿದ್ದರೆ, ದಕ್ಷಿಣ ಆಫ್ರಿಕಾದ ಜಾಂಟಿ ರೋಡ್ಸ್ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಸೋನಿ ಟೆನ್-1, ಸೋನಿ ಟೆನ್-3 ಚಾನಲ್‌ಗಳಲ್ಲಿ ಪಂದ್ಯಗಳು ನೇರಪ್ರಸಾರವಾಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net