ಗುತ್ತಿಗಾರು ನವೋದಯ ಶಾಲೆಗೆ ಆಯ್ಕೆ

New Project (2)
Published on

ಸುಬ್ರಹ್ಮಣ್ಯ: ಗುತ್ತಿಗಾರು ಅರಿವು ಕೇಂದ್ರ, ಗ್ರಾಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಗುತ್ತಿಗಾರು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಸಹಯೋಗದೊಂದಿಗೆ ನಡೆಯುತ್ತಿರುವ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ವಿದ್ಯಾರ್ಥಿಗಳಾದ ಹಿತೈಷಿ ಎಚ್, ಧೃತಿಕ್ ಎಂ.6ನೇ ತರಗತಿಗೆ ಮುಡಿಪು ನವೋದಯ ಶಾಲೆಗೆ ಪ್ರಥಮ ಹಂತದಲ್ಲಿ ಆಯ್ಕೆಯಾಗಿರುತ್ತಾರೆ.

ಸತತ ಏಳು ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರಾರಂಭವಾದ ತರಬೇತಿ ಕೇಂದ್ರದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 30 ವಿದ್ಯಾರ್ಥಿಗಳು ನೋಂದಣಿಗೊಂಡು ಉಚಿತ ತರಬೇತಿ ಪಡೆದು ಆಯ್ಕೆಯಾಗಿದ್ದಾರೆ. ಇವರಿಗೆ ಗುತ್ತಿಗಾರು ಗ್ರಂಥಾಲಯ ಮೇಲ್ವಿಚಾರಕಿ ಅಭಿಲಾಷ ಮೋಟ್ನೂರು ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net