ಮುಖ್ಯಮಂತ್ರಿಗಳ ಪದಕಕ್ಕೆ ಮಂಗಳೂರಿನ ಅರಣ್ಯ ಸಂಚಾರಿ ದಳದ ಪ್ರಶಾಂತ್ ಆಯ್ಕೆ

prashanth
ಮಂಗಳೂರಿನ ಅರಣ್ಯ ಸಂಚಾರಿ ದಳದ ಪ್ರಶಾಂತ್
Published on

ಬೈಂದೂರು: ಕಳೆಂಜದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿದ್ದ, ಪ್ರಸಕ್ತ ಮಂಗಳೂರಿನ ಅರಣ್ಯ ಸಂಚಾರಿ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಶಾಂತ್ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಒತ್ತುವರಿ ತೆರವು, ಕ್ರೀಡಾಕೂಟಗಳಲ್ಲಿ ಸಾಧನೆ ಇತ್ಯಾದಿ ಕೆಲಸ ಕಾರ್ಯಗಳು ಹಾಗೂ ಶೌರ್ಯ, ದಿಟ್ಟತನ ತೋರಿಸಿರುವ ಮೂಲಕ ಅರಣ್ಯ ಇಲಾಖೆಯಲ್ಲಿ ಗಣನೀಯ ಸಾಧನೆ ಮಾಡಿರುವ ಅಧಿಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿಆರ್‌ಎಫ್‌ಒ ಪ್ರಶಾಂತ್ 2023ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net