ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

gan (5)
Published on

ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಚಿಕ್ಕಬಳ್ಳಾಪುರದ ಶಾಂತಾ ವಿದ್ಯಾನಿಕೇತನ ಶಾಲೆಯಲ್ಲಿ ಆ.17 ಮತ್ತು 18 ರಂದು ನಡೆದ ಪ್ರಾದೇಶಿಕ ಮಟ್ಟದ ಕಬಡ್ಡಿ ಸ್ಪರ್ಧೆಗಳಲ್ಲಿ 14 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ವಿದ್ಯಾರ್ಥಿಗಳಾದ ವೇದಿತ್, ಅರುಣ, ವಾಣಿಕ್ಯ ಮತ್ತು ದೀಕ್ಷಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವರ್ಷ ವಯೋಮಿತಿಯ ಸ್ಪರ್ಧೆಗಳಲ್ಲಿ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮೀ, ಭವ್ಯಶ್ರೀ, ತನಿಷ್ಕಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net