21.7 C
Bengaluru
Tuesday, January 21, 2020

ಯಮಕನಮರಡಿ: ದೇಶಕ್ಕೆ ಸಮರ್ಥ ನಾಯಕರನ್ನು ಆಯ್ಕೆ ಮಾಡಿ

Latest News

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಆಕಸ್ಮಿಕ ಬೆಂಕಿ, ಚಾಲಕ, ಕ್ಲೀನರ್ ಪಾರು

ಚಿತ್ರದುರ್ಗ: ಚಳ್ಳಕೆರೆ ಕಾಲುವೆಹಳ್ಳಿ ಬಳಿ ಲಾರಿಯಲ್ಲಿ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಲಾರಿ. ಅದೃಷ್ಟವಶಾತ್ ತಪ್ಪಿದ ಅನಾಹುತ, ಚಾಲಕ, ಕ್ಲೀನರ್ ಪಾರು. ಬೆಂಕಿ ನಂದಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ತಳಕು...

ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕರೆ

ಯಮಕನಮರಡಿ: ದೇಶ ಇಂದು ಕವಲುದಾರಿಯಲ್ಲಿದ್ದು, ಜಾಗೃತ ಮತದಾರರು ಯೋಗ್ಯವಾದ ದಾರಿ ಆಯ್ದುಕೊಂಡು ಲೋಕಸಭೆ ಚುನಾವಣೆಯಲ್ಲಿ ದೇಶಕ್ಕೆ ಸಮರ್ಥ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಹೇಳಿದ್ದಾರೆ.

ಗ್ರಾಮದಲ್ಲಿ ಬುಧವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ನಿಮಿತ್ತ ಆಯೋಜಿಸಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. 60 ವರ್ಷಗಳಿಂದ ಗಾಂಧೀಜಿ ಹೆಸರಿನಲ್ಲಿ ಕಾಂಗ್ರೆಸ್ ರಾಜಕಾರಣ ಮಾಡಿ ದೇಶವನ್ನು ಅಧೋಗತಿಗೆ ಒಯ್ಯುತ್ತಿದೆ. ಅದು ಜಾತೀಯ ಪಕ್ಷವಾಗಿದ್ದು, ಒಂದೇ ಸಮುದಾಯಕ್ಕೆ ಸೀಮಿತವಾಗಿದೆ ಎಂದು ಆರೋಪಿಸಿದರು.

ಜಗತ್ತೇ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಿದೆ. ಹಿಂದು ಎನ್ನುವುದು ಒಂದು ರಾಷ್ಟ್ರೀಯ ಶಬ್ದವಾಗಿದ್ದು, ಇಡೀ ಜಗತ್ತು ಗೌರವ ನೀಡುತ್ತಿದೆ. ಹಿಂದು ಧರ್ಮ ಕೋಮುವಾದಿ ಎಂದು ಕೆಲವರು ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಜಯ ಅಡಕೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಜನರು ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಸದಸ್ಯರಾದ ಪವನ ಕತ್ತಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಬಿ.ಬಿ.ಹಂಜಿ, ಈರಣ್ಣ ಹಾಲದೇವರಮಠ, ಮಾರುತಿ ಅಷ್ಟಗಿ, ರವಿ ಹಿರೇಮಠ, ಮಹಾವೀರ ನಾಶಿಪುಡಿ, ಶಶಿಕಾಂತ ಮಠಪತಿ, ಈರಣ್ಣ ಗುರವ, ಶ್ರೀಶೈಲ ಯಮಕನಮರಡಿ, ಗುರುಸಿದ್ದ ಪಾಯನ್ನವರ, ಬಸವರಾಜ ಉದೋಶಿ ಮತ್ತಿತರರು ಉಪಸ್ಥಿತರಿದ್ದರು. ಜೆ.ಎನ್.ಅವಾರ್ಡೆ ಸ್ವಾಗತಿಸಿ, ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...