ನೈಜ ಆರ್.ಹೆಗ್ಡೆ ರಾಜ್ಯಮಟ್ಟಕ್ಕೆ ಆಯ್ಕೆ

Naija
ನೈಜ ಆರ್ ಹೆಗ್ಡೆ.
Published on

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರದಲ್ಲಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಆರ್.ಹೆಗ್ಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾ ಕುಮಾರಿ ಶೆಟ್ಟಿ ದಂಪತಿ ಪುತ್ರಿ. ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net