

ಕೊಕ್ಕರ್ಣೆ: ಸಂತೆಕಟ್ಟೆಯ ಮಿಲಾಗ್ರಿಸ್ ಪ್ರೌಢಶಾಲೆಯಲ್ಲಿ ನಡೆದ 2024-25ನೇ ಸಾಲಿನ ಬ್ರಹ್ಮಾವರ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ 1500 ಮೀ.ಓಟದಲ್ಲಿ ಕರ್ಜೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿನಿ ಸೌಜನ್ಯಾ ಪ್ರಥಮ ಸ್ಥಾನ ಪಡೆದಿದ್ದು, ಜತೆಗೆ 3000 ಮೀ ಓಟದಲ್ಲಿ ಹಾಗೂ 800ಮೀ ಓಟದಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ. ಶ್ವೇತಾ ಉದ್ದ ಜಿಗಿತದಲ್ಲಿ ಪ್ರಥಮ ಹಾಗೂ 400 ಮೀ.ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪೋಲ್ವಾಲ್ಟ್ ಕಾರ್ತಿಕ್ ತೃತೀಯ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.