ನರಗುಂದ: ಗದಗನ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ. 20ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಟ್ಟಣದ ಸಚಿನ್ ಆರೇರ ಹಾಗೂ ಪ್ರವೀಣ ಪಾಟೀಲ ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಸಚಿನ್ ಆರೇರ 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ ಹಾಗೂ ಡಬಲ್ಸ್‌ನಲ್ಲಿ ಪ್ರವಿಣ ಪಾಟೀಲ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಗುಂಪು ಸ್ಪರ್ಧೆಯಾದ 4*400 ಮೀಟರ್ ರೀಲೆ ಸ್ಪರ್ಧೆಯಲ್ಲಿ ಸಚಿನ್ ಆರೇರ, ಮಂಜುನಾಥ ಕೊಣ್ಣೂರ, ವಿನೋದ ಕಪಲಿ, ಸುನೀಲ ಪಾಟೀಲ ನೇತೃತ್ವದ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ಬಿ.ಎನ್. ಚವಡಿ ತಿಳಿಸಿದ್ದಾರೆ.