ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕುಮಟ್ಟಕ್ಕೆ ಆಯ್ಕೆ

Kdb_Volleyball
Published on

ಕಡಬ: ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ವಲಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಹುಡುಗರ ವಿಭಾಗದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮತ್ತು ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಅಭಿನಂದಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ತರಬೇತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net