ಬಂಗಾಡಿ ಸಹಕಾರಿಗೆ ಪದಾಧಿಕಾರಿಗಳ ಆಯ್ಕೆ

New Project (16)
Published on

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹರೀಶ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ. ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು. ವಸಂತಗೌಡ, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್, ರಮೇಶ್ ಕೆಂಗಾಜೆ, ಶೀನಪ್ಪ ಗೌಡ, ಪುಷ್ಪಲತಾ ಕೆ, ವೇದಾವತಿ, ರಘುನಾಥ, ಸತೀಶ್ ನಾಯ್ಕ ನಿರ್ದೇಶಕರಾಗಿ ಆಯ್ಕೆಯಾದರು. ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ್ದ ಎಲ್ಲ 12 ಅಭ್ಯರ್ಥಿಗಳು ಜಯಗಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net