More

    ಕೆಲವು ಕ್ಷೇತ್ರಗಳಿಗೆ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಸಿಎಂ ಬಸವರಾಜ ಬೊಮ್ಮಾಯಿ‌ ಸ್ಪಷ್ಟ ಸುಳಿವು

    ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಗೆ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಹೊಸ ಪ್ರಯೋಗ ಮಾಡಲಿದ್ದು, ಕೆಲವು ಕ್ಷೇತ್ರಗಳಿಗೆ ಅಚ್ಚರಿ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸ್ಪಷ್ಟ ಸುಳಿವು ನೀಡಿದರು.

    ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ರಾಜ್ಯ ಚುನಾವಣಾ ಸಮಿತಿ ಸಭೆ ಇಂದು, ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ‌ ಸಿದ್ಧಪಡಿಸಿ ಕೇಂದ್ರ ಸಮಿತಿಗೆ ಶಿಫಾರಸು ಮಾಡಲಾಗುವುದು. ದೆಹಲಿಯಲ್ಲಿ ಏ.8ರಂದು ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಅದೇ ದಿನ ಅಭ್ಯರ್ಥಿಗಳ ಪಟ್ಟಿ ಆಖೈರಾಗಲಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

    ಸಮಸ್ಯೆಯಿಲ್ಲ
    ಬಹುಮತದೊಂದಿಗೆ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಈ ಬೆಳವಣಿಗೆಯಾಗಿದ್ದು, ಆಕಾಂಕ್ಷೆಗಳು ಹೆಚ್ಚಿರುವುದು ಸಹಜ. ಪ್ರಬಲ ಆಕಾಂಕ್ಷೆಗಳಿರುವ ಕ್ಷೇತ್ರಗಳಲ್ಲಿ ಟಿಕೆಟ್ ಸಿಗಲ್ಲವೆಂದು ಖಾತರಿಯಾದವರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ಆಯನೂರು ಮಂಜುನಾಥ್ ಮಾತ್ರ ಬಂಡಾಯವೆದ್ದಿದ್ದು, ಬೇರೆ ಯಾವುದೇ ಕ್ಷೇತ್ರದಲ್ಲಿ ಸಮಸ್ಯೆಯಿಲ್ಲ ಎಂದು ಸಿಎಂ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

    ಇದನ್ನೂ ಓದಿ: ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

    ಇಲ್ಲದ ಸೀಟಿಗೆ ಕಚ್ಚಾಟ
    ಅಧಿಕಾರಕ್ಕೆ ಬರುವುದಿಲ್ಲ, ಸಿಎಂ ಕುರ್ಚಿ ಸಿಗುವುದಿಲ್ಲ ಎಂಬುದು ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ಇಲ್ಲದ ಸೀಟಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಟವೆಲ್ ಹಾಕಿ ಕಚ್ಚಾಟಕ್ಕೆ ಇಳಿದಿದ್ದಾರೆ ಎಂದು ಗೇಲಿ ಮಾಡಿದ್ದಾರೆ. ಜನರ ನಾಡಿಮಿಡಿ ಏನಿದೆಯೋ ಶಾಸಕರ ನಾಡಿಮಿಡಿತ ಅದೇ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜನರ ನಾಡಿಮಿಡಿತ ಏನಿದೆ ಎಂದು ಸಿದ್ದರಾಮಯ್ಯ ಜ್ಯೋತಿಷಿಗಳೆ?. ಬಿಜೆಪಿ ಪರ ಗಾಳಿ ಬೀಸುತ್ತಿರುವುದು ಗೊತ್ತಾಗಿ ಹೊಸ ವಿಚಾರ ಏನೂ ಹೇಳಿಲ್ಲ. ಕಾಂಗ್ರೆಸ್​ನಲ್ಲಿ ಆಂತರಿಕವಾಗಿ ಏನೋ ನಡೆದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳಿಕೆಗಳು, ಮುಖ್ಯಮಂತ್ರಿ ಅಭ್ಯರ್ಥಿ ವಿಷಯದಲ್ಲಿ ದ್ವಂದ್ವ ನಿಲುವು ಎಲ್ಲವನ್ನೂ ಸಾರುತ್ತಿದೆ ಎಂದು ಸಿಎಂ ಬೊಮ್ಮಾಯಿ‌ ಕುಟುಕಿದರು.

    ಆನ್‌ಲೈನ್ ಗೇಮಿಂಗ್ ಆ್ಯಪ್‌ನಲ್ಲಿ 49 ರೂ. ಹೂಡಿಕೆ ಮಾಡಿದ ವ್ಯಕ್ತಿ ರಾತ್ರೋರಾತ್ರಿ ಕೋಟಿ ರೂ. ಒಡೆಯನಾದ!

    ಚೆನ್ನಕೇಶವ ಸ್ವಾಮಿ ರಥದ ಮುಂದೆ ಕುರಾನ್ ಪಠಣಕ್ಕೆ ಅವಕಾಶವಿಲ್ಲ: ಧಾರ್ಮಿಕ ದತ್ತಿ ಆಯುಕ್ತರ ಆದೇಶ

    ಚಿರಂಜೀವಿ ಸರ್ಜಾ ಅಭಿನಯದ ಕೊನೆಯ ಚಿತ್ರ ‘ರಾಜ ಮಾರ್ತಾಂಡ’ ಸದ್ಯದಲ್ಲೇ ಬಿಡುಗಡೆ …

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts