More

    ಸ್ವಯಂ ಘೋಷಿತ ಆಸ್ತಿ ತೆರಿಗೆಗೆ ಹೊಸ ರೂಪ!

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ನಿರೀಕ್ಷಿತ ಮಟ್ಟದಲ್ಲಿ‌ ನಡೆಯದ ಹಿನ್ನೆಲೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಬದಲು ಪರ್ಯಾಯ ವ್ಯವಸ್ಥೆ ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ.

    ಉಪ‌ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿ.ಕೆ ಶಿವಕುಮಾರ್ ಸುದ್ದಿಗಾರರಿಗೆ ಈ ಬಗ್ಗೆ ಸುಳಿವು ನೀಡಿ, ಬೆಂಗಳೂರು ನಗರದ ತೆರಿಗೆ ಸಂಗ್ರಹ ತೃಪ್ತಿಕರವಾಗಿಲ್ಲ. ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿ ಇದ್ದು, ವಾರ್ಷಿಕ ಮೂರು ಸಾವಿರ ಕೋಟಿ ರೂ. ಸಂಗ್ರಹವಾಗುತ್ತಿದೆಯಷ್ಟೇ ಎಂದರು.

    ಜನರನ್ನು ನಂಬಿದ್ದೆವು, ಆದರೆ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಲ್ಲಿ ಕಡಿಮೆ ಘೋಷಿಸಿಕೊಳ್ಳುತ್ತಿದ್ದಾರೆ. ವಸತಿ ಉದ್ದೇಶಕ್ಕೆ ಅನುಮತಿ ಪಡೆದು ವಾಣಿಜ್ಯ ಕಟ್ಟಡ ಕಟ್ಟಿಕೊಂಡು ತೆರಿಗೆ ಕಡಿಮೆ ಕೊಡುತ್ತಿದ್ದಾರೆ. ಹೀಗಾಗಿ ಹೊಸ ರೀತಿಯಲ್ಲಿ ಸಂಗ್ರಹಕ್ಕೆ ಚಿಂತನೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

    ಶೇ.ನೂರರಷ್ಟು ತೆರಿಗೆ ಸಂಗ್ರಹವಾಗಬೇಕು. ಈ‌ನಿಟ್ಟಿನಲ್ಲಿ ಮನೆ‌ಮನೆಗೂ ಭೇಟಿ ಕೊಟ್ಟು ಪರಿಶೀಲನೆಯಾಗಬೇಕಾಗುತ್ತದೆ ಎಂದೂ ಅವರು ಹೇಳಿದರು.

    ಸರ್ಕಾರಿ ಕಟ್ಟಡಗಳು ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಪತ್ರ ಬರೆಯಲಾಗಿದೆ. ಕೇಂದ್ರ ಸ್ವಾಮ್ಯದ ಸಂಸ್ಥೆಗಳು ಬಾಕಿ ಉಳಿಸಿಕೊಂಡಿದ್ದವು. ಇದೀಗ ಪತ್ರ ಬರೆದು ತೆರಿಗೆ ಕಟ್ಟಲು ತಿಳಿಸಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts