ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗೆ ಸ್ವಉದ್ಯೋಗ

gan-16
Published on

ಕುಂದಾಪುರ: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ ಗ್ರಾಮೀಣ ಮಟ್ಟದಲ್ಲಿ ಮಹಿಳೆಯರನ್ನು ಸ್ವ ಉದ್ಯೋಗಕ್ಕೆ ಪ್ರೇರಣೆ ನೀಡಿ ಆರ್ಥಿಕವಾಗಿ ಮೇಲ್ಮಟ್ಟಕ್ಕೆ ಬರುವಂತೆ ಮಾಡುವ ಕಾರ್ಯಕ್ರಮ. ಆ ಮೂಲಕ ಅನೇಕ ಮಹಿಳೆಯರು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ ಎಂದು ತಾಲೂಕಿನ ಯೋಜನಾಧಿಕಾರಿ ಪಾರ್ವತಿ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ವಲಯದ ಕರ್ಕುಂಜೆ ಕಾರ್ಯಕ್ಷೇತ್ರದ ಕರ್ಕುಂಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ಹೊಲಿಗೆ ತರಬೇತಿ ಸಮಾರೋಪ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

ಹಟ್ಟಿಯಂಗಡಿ ವಲಯದ ಕರ್ಕುಂಜೆ ಒಕ್ಕೂಟ ಅಧ್ಯಕ್ಷೆ ಸುಜಾತಾ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಜನಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ ಪೈ, ಕರ್ಕುಂಜೆ ಗ್ರಾಪಂ ಸದಸ್ಯ ಸಂತೋಷ್ ಪೂಜಾರಿ, ಹೊಲಿಗೆ ತರಬೇತಿ ಶಿಕ್ಷಕಿ ಯಾಸ್ಮಿನ್, ಮೇಲ್ವಿಚಾರಕ ಸುಬ್ರಹ್ಮಣ್ಯ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು, ಸೇವಾ ಪ್ರತಿನಿಧಿ ಸುಚಿತ್ರಾ, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಜಯಲಕ್ಷ್ಮೀ ಮತ್ತು ಸುಜಾತಾ ಅನಿಸಿಕೆ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net