More

    ಸ್ವಯಂ ಉದ್ಯೋಗ ಮಾಹಿತಿ ಕಾರ್ಯಾಗಾರ

    ವಿಜಯಪುರ: ಸರ್ಕಾರಿ ಸೌಲಭ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಸರ್ಕಾರ ಸರ್ವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುತ್ತದೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅಧಿಕಾರಿ ರಾಜಶೇಖರ ದೈವಾಡಿ ಹೇಳಿದರು.

    ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಜೀವನಜ್ಯೋತಿ ಮಾಜಿ ದೇವದಾಸಿ ಮಹಿಳೆಯರ ಒಕ್ಕೂಟದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ವಿಮುಕ್ತ ದೇವದಾಸಿ ಮಹಿಳೆಯರ ಒಕ್ಕೂಟದ ಬಲವರ್ದನೆ ಹಾಗೂ ಸ್ವಯಂ ಉದ್ಯೋಗ ಮಾಹಿತಿ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ತಾಯಿಯ ಗರ್ಭದಿಂದ ಗೋರಿಯವರೆಗೂ ಸರ್ಕಾರ ಯೋಜನೆಗಳನ್ನು ರೂಪಿಸಿದೆ. ಸಮಾಜದ ಎಲ್ಲ ಸ್ತರದವರಿಗೂ ಯೋಜನೆಗಳಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ವರ್ಗದ ಜನ ಒಂದಿಲ್ಲಾ ಒಂದು ಸರ್ಕಾರಿ ಸೌಲಭ್ಯ ಪಡೆದುಕೊಳ್ಳುತ್ತಾರೆ. ಹೀಗಾಗಿ ವಿಮುಕ್ತ ದೇವದಾಸಿಯರಿಗೂ ಅನೇಕ ಸೌಲಭ್ಯಗಳಿದ್ದು ಅವುಗಳನ್ನು ಪಡೆದು ಸ್ವಾವಲಂಬಿ ಬದುಕು ಸಾಗಿಸಬೇಕೆಂದರು.

    ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಪದ್ಮಾ ಮಾತನಾಡಿ, ಪಶು ಸಂಗೋಪನೆ ಇಲಾಖೆಯಿಂದ ವಿಮುಕ್ತ ದೇವದಾಸಿಯರಿಗಾಗಿ ಎಮ್ಮೆ, ಆಡು ಸಾಕಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕ ಸ್ವಾವಲಂಬಿಯಾಗಬೇಕೆಂದರು.

    ಅನೌಪಚಾರಿಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಫಾ. ಟಿಯೋಲ್ ಮಚಾದೋ ಅಧ್ಯಕ್ಷತೆ ವಹಿಸಿದ್ದರು. ಒಕ್ಕೂಟದ ಅದ್ಯಕ್ಷೆ ರತ್ನಾ ಗುಡಿಮನಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts