ಎನ್.ಆರ್.ಪುರ: ಬೀದಿ ಬದಿ ವ್ಯಾಪಾರಿಗಳ ಸುರಕ್ಷತೆಗಾಗಿ 2019ರಿಂದ ಕೇಂದ್ರ ಸರ್ಕಾರ ಸಹಕಾರ ನೀಡಲು ಸ್ವನಿಧಿ ಯೋಜನೆ ಜಾರಿಗೊಳಿಸಿದೆ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಗುರುಮೂರ್ತಿ ಹೇಳಿದರು.
ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಬೀದಿಬದಿ ವ್ಯಾಪಾರಿಗಳ ಕುಟುಂಬಗಳ ಸಮಗ್ರ ಅಭಿವೃದ್ಧಿಗಾಗಿ ಶ್ರಮಯೋಗಿ ಮಾನ್-ಧನ ಯೋಜನೆಯ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಕುರಿತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಬೀದಿ ಬದಿಯ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿದರದಲ್ಲಿ 10, 20, 50 ಸಾವಿರ ರೂ. ಸಾಲ ನೀಡಲಾಗುವುದು ಎಂದರು.
ಹಿರಿಯ ಕಾರ್ಮಿಕ ಇಲಾಖೆ ನಿರೀಕ್ಷಕ ಜೀವನ್ ಮಾತನಾಡಿ, ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯವಿದೆ. ಪ್ರಧಾನ ಮಂತಿ ್ರಶ್ರಮಯೋಗಿ ಮಾನ್‌ದನ್ ಯೋಜನೆಯಡಿ ಸೌಲಭ್ಯ ಪಡೆಯಲು ಬೀದಿ ಬದಿ ವ್ಯಾಪಾರಿಗಳು ಮಾತ್ರವಲ್ಲದೆ, ಮನೆ ಕೆಲಸದವರು ಟೈಲರ್, ಪತ್ರಿಕಾ ವಿತರಕ ಕಾರ್ಮಿಕರು, ಅಗಸರು, ಕ್ಷೌರಿಕರು, ಅಕ್ಕಸಾಲಿಗರು,ಫೋಟೋಗ್ರಾಫರ್‌ಗಳು ಮತ್ತಿತರ ಅಸಂಘಟಿತ ವಲಯದ ಕಾರ್ಮಿಕರಾಗಿದ್ದು 18ರಿಂದ 40 ವರ್ಷದೊಳಗಿರಬೇಕು. ಕೇಂದ್ರ ಸರ್ಕಾರ ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಗಳ ವಯಸ್ಸಯ 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ ಎಂದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಉಮಾ ಕೇಶವ್, ಪ್ರಾದೇಶಿಕ ಮಟ್ಟದ ಮಹಿಳಾ ಒಕ್ಕೂಟದ ಅಧ್ಯಕ್ಷೆ ಭಾನುಮತಿ, ಸಮುದಾಯ ಸಂಘಟಕ ಲಕ್ಷ್ಮಣಗೌಡ, ಸಿಆರ್‌ಪಿ ಶೃತಿ ಇದ್ದರು.
