ಸ್ವಾವಲಂಬನೆಗೆ ಸ್ವಸಹಾಯ ಸಂಘಗಳೇ ಶಕ್ತಿ

blank

ಸಾಗರ: ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಕುಟುಂಬ ನಿರ್ವಹಣೆ ಜತೆಗೆ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಕ್ರಿಯಾಶೀಲತೆ ವೃದ್ಧಿಯಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಾಗರದ ಶಿವಪ್ಪ ನಾಯಕ ನಗರದಲ್ಲಿರುವ ಆಟೋ ಚಾಲಕರ ಸಭಾಭವನದಲ್ಲಿ ಭಾನುವಾರ ಶ್ರೀ ಲಕ್ಷ್ಮೀ ಬಲಿಜ ಮಹಿಳಾ ಸ್ವಸಹಾಯ ಸಂಘದ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಆರ್ಥಿಕ ಸ್ಥಿತಿ ಕಾಪಾಡಲು ಸೀಶಕ್ತಿ ಸ್ವಸಹಾಯ ಸಂಘಗಳು ಪ್ರಮುಖಪಾತ್ರ ವಹಿಸುತ್ತಿದೆ. ಸರ್ಕಾರ ಆರಂಭದಲ್ಲಿ ಸ್ವಸಹಾಯ ಸಂಘಗಳ ಸ್ಥಾಪನೆಗೆ ಚಾಲನೆ ನೀಡಿತ್ತು. ನಂತರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಆರಂಭವಾಯಿತು. ಎಲ್ಲ ಸ್ವಸಹಾಯ ಸಂಘಗಳು ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿವೆ. ಗ್ರಾಮೀಣ ಭಾಗದ ಅಭಿವೃದ್ಧಿಯಲ್ಲಿ ಸ್ವಸಹಾಯ ಸಂಘಗಳು ತಮ್ಮದೆ ಕೊಡುಗೆ ನೀಡುತ್ತಿವೆ.
ಇತ್ತೀಚೆಗೆ ಮಹಿಳೆಯರು ರಾಜಕೀಯ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಗುರುತಿಸಿಕೊಂಡು ಸಮಾಜದ ಏಳಿಗೆಗೆ ನಿಮ್ಮ ಕೊಡುಗೆ ನೀಡುತ್ತಿದ್ದೀರಿ. ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಒತ್ತು ನೀಡಿ. ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಸಹಕಾರ ನೀಡಿ. ನಿಮ್ಮ ಸಂಘಟನೆ ಮೂಲಕ ನಿಮ್ಮ ಹಕ್ಕು ದೊರಕಿಸಿಕೊಳ್ಳುವ ಪ್ರಯತ್ನ ನಡೆಸಿ. ಸೀಶಕ್ತಿ ಸಂಘಗಳ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಶಾಂತಾ ವಿ. ಪಾಂಡುರಂಗ, ಲತಾ ಗಂಗಾಧರ್, ಶಶಿಕಲಾ ಗೋಪಾಲ್, ನಾಗವೇಣಿ ನಾಗರಾಜ್, ನೇತ್ರಾ ರಾಘವೇಂದ್ರ, ಜ್ಯೋತಿ ರಾಘವೇಂದ್ರ, ಶ್ರೀನಿಧಿ ಅಭಿಷೇಕ್, ತ್ರಿಷಾ ಮಂಜುನಾಥ್, ಸುನೀತಾ ಶ್ರೀನಾಥ್, ಲಲಿತಮ್ಮ, ಮಧುಮಾಲತಿ ಇತರರಿದ್ದರು.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…