More

    ಅರ್ಧಿಕ ಸ್ವಾವಲಂಬನೆಗೆ ಸ್ವ ಸಹಾಯ ಒಕ್ಕೂಟಗಳು ಸಹಕಾರಿ

    ಎನ್.ಆರ್.ಪುರ: ಎನ್‌ಆರ್‌ಎಲ್‌ಎಂ ಸಂಜೀವಿನಿ ಕಾರ್ಯಕ್ರಮದಲ್ಲಿ ಮಹಿಳೆಯರು ಸ್ವಸಹಾಯ ಸಂಘದ ಮೂಲಕ ಜೀವನೋಪಾಯ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಎನ್‌ಆರ್‌ಎಲ್‌ಎಂ ಸಂಜೀವಿನಿ ಕಾರ್ಯಕ್ರಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರಕುಮಾರ್ ಹೇಳಿದರು.
    ನಾಗಲಾಪುರ ಗ್ರಾಪಂ ಸಭಾಂಗಣದಲ್ಲಿ ನಾಗಲಾಪುರ ಸಂಜೀವಿನಿ ಗ್ರಾಪಂ ಮಟ್ಟದ ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳ ಒಕ್ಕೂಟದ 2 ದಿನದ ವಾರ್ಷಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಚಿಕ್ಕಮಗಳೂರಲ್ಲಿ 220 ಎನ್‌ಆರ್‌ಎಂಎಲ್ ಸಂಜೀವಿನಿ ಸ್ವಸಹಾಯ ಸಂಘಗಳಿವೆ. ಇದುವರೆಗೆ ಎನ್.ಆರ್.ಪುರ ತಾಲೂಕಿನಲ್ಲಿ ಮಾತ್ರ ಎರಡು ಒಕ್ಕೂಟಗಳ ವಾರ್ಷಿಕೋತ್ಸವ ನಡೆದಿದೆ. ಕಳೆದ 3 ವರ್ಷದ ಹಿಂದೆ ಸಂಜೀವಿನಿ ಸ್ವಸಹಾಯ ಸಂಘಗಳು ಪ್ರಾರಂಭವಾಗಿದೆ ಎಂದರು.
    ಇದುವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 150ಕ್ಕೂ ಹೆಚ್ಚು ಕಾರ್ಯಕ್ರಮ ನಡೆಸಿದ್ದೇವೆ. ಪ್ರಾರಂಭದಲ್ಲಿ ಉಳಿತಾಯಕ್ಕೆ ಸೀಮಿತವಾಗಿದ್ದ ಸ್ವ ಸಹಾಯ ಒಕ್ಕೂಟಗಳು ಈಗ ಜೀವನ ನಡೆಸಲು ಅನುಕೂಲವಾಗುವಂತೆ ಉದ್ಯಮ ಸ್ಥಾಪಿಸಿ ಆರ್ಥಿಕ ಚಟುವಟಿಕೆಗಳಲ್ಲೂ ಭಾಗಿಯಾಗಿದ್ದಾರೆ.
    ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಬೇಕು ಎಂದು ಕೇಂದ್ರ ಸರ್ಕಾರದಿಂದ ರಾಷ್ಟೀಯ ಗ್ರಾಮೀಣ ಜೀವನೋಪಯೋಗ ಇಲಾಖೆ ಹುಟ್ಟು ಹಾಕಲಾಯಿತು. ಬೇರೆ ರಾಜ್ಯದಲ್ಲಿ ಬೇರೆ,ಬೇರೆ ಹೆಸರು ಇಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಸಂಜೀವಿನಿ ಒಕ್ಕೂಟ ಎಂದು ಹೆಸರಿಡಲಾಗಿದೆ. ಈಗಾಗಲೇ 65 ತರಬೇತಿ ನೀಡಿದ್ದೇವೆ. ಈ ಹಿಂದೆ ಜಿಲ್ಲಾ ಕೇಂದ್ರದಲ್ಲಿ ತರಬೇತಿ ನಡೆಯುತ್ತಿತ್ತು.ಈಗ ತಾಲೂಕು ಕೇಂದ್ರದಲ್ಲೇ ತರಬೇತಿ ನೀಡಲಾಗುತ್ತಿದೆ.ಪ್ರಸ್ತುತ 15 ಲಕ್ಷ ಅನುದಾನವನ್ನು ನೇರವಾಗಿ ಸಂಜೀವಿನಿ ಒಕ್ಕೂಟದ ಖಾತೆಗೆ ಹಾಕಿದ್ದೇವೆ ಎಂದರು.
    ನಾಗಲಾಪುರ ಸಂಜೀವಿನಿ ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಕಮಲ ಸುಧೀರ್, ಗ್ರಾಪಂ ಅಧ್ಯಕ್ಷೆ ರೀನಾಬೆನ್ನಿ, ಸಾಹಿತಿ ಜಯಮ್ಮ, ಸದಸ್ಯರಾದ ಸುಮಿತ್ರ, ಶೋಭಾ, ಕಲಾವಿದ ಅಭಿನವ ಗಿರಿರಾಜ್, ಪಿಡಿಒ ಪ್ರೇಮಕುಮಾರ್,ಚೈತ್ರಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts