More

    ಸ್ವಯಂ ಪ್ರೇರಣೆಯಿಂದ ತಪಾಸಣೆಗೆ ಬನ್ನಿ-ಸಚಿವ ಜಗದೀಶ ಶೆಟ್ಟರ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 7 ಜನರಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕು ಇನ್ನಷ್ಟು ಹರಡದಂತೆ ತಡೆಯಲು ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.

    ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಕರೊನಾದಿಂದ ಜಗತ್ತು ತಲ್ಲಣಗೊಂಡಿದೆ. ದೆಹಲಿಯ ಧಾರ್ಮಿಕ ಸಭೆಗೆ ಹೋಗಿ ಬಂದವರಲ್ಲಿಯೇ ಹೆಚ್ಚಿನ ಸೋಂಕು ಪತ್ತೆಯಾಗುತ್ತಿದ್ದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

    ಸೋಂಕು ನಿಯಂತ್ರಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೂ ದೆಹಲಿ ಧಾರ್ಮಿಕ ಸಭೆಗೆ ತೆರಳಿದವರು ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು. ಕರೊನಾ ವೈರಸ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು ಎಂದು ಶೆಟ್ಟರ್ ಕೋರಿದರು.
    ಸಹಕಾರ ನೀಡಿ: ನೆರೆಯ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ಸೋಂಕು ಕಂಡುಬಂದಿದ್ದರಿಂದ ಗಡಿಭಾಗದಲ್ಲಿ ತೀವ್ರ ನಿಗಾ ವಹಿಸಲಾಗಿದೆ.

    ಆಯಾ ರಾಜ್ಯದಲ್ಲಿರುವ ಕಾರ್ಮಿಕರಿಗೆ

    ಲಾಕ್‌ಡೌನ್ ಮುಗಿಯುವವರೆಗೆ ಅಲ್ಲಿಯೇ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 50 ಸಾವಿರ ಲೀಟರ್‌ನಷ್ಟು ಹಾಲನ್ನು ಬಡವರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ದಿನಸಿ, ತರಕಾರಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ವೈದ್ಯರಿಗೆ ಅಗತ್ಯ ಸೇವೆ ನೀಡಲು ಸೂಚಿಸಲಾಗಿದೆ. ಆದರೂ ಕರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‌ಡೌನ್ ಮುಂದುವರಿಯುವ ಸಾಧ್ಯತೆ ಇದೆ. ಅದಕ್ಕೆ ಜನರು ಸಹಕಾರ ನೀಡಬೇಕು ಎಂದರು.

    ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಸಚಿವರಾದ ಶ್ರೀಮಂತ ಪಾಟೀಲ, ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜೀವ್, ಮಹೇಶ ಕುಮಠಳ್ಳಿ, ಡಿ.ಎಂ. ಐಹೊಳೆ ಇದ್ದರು.

    ಕರೊನಾ ಸೋಂಕು ದೃಢಪಟ್ಟಿರುವ ಪ್ರದೇಶವನ್ನು ಕಂಟೆನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿ ಸಂಗ್ರಹಿಸುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡುವವರ ವಿರುದ್ಧ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು.
    | ಜಗದೀಶ ಶೆಟ್ಟರ್ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts