ಸರ್ಕಾರದ ಸವಲತ್ತು ಸದ್ಬಳಕೆ : ವಾಸು ಪೂಜಾರಿ ಲೊರೆಟ್ಟೊ ಕರೆ

12
Published on

ಬಂಟ್ವಾಳ: ಇಲ್ಲಿನ ಪುರಸಭೆಯಲ್ಲಿ ಡೇ ನಲ್ಮ್ ಅಭಿಯಾನದಡಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ, ಸ್ವ ನಿಧಿ ಸಮೃದ್ಧಿ ಮೇಳ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮೂಲಕ ಡಿಜಿಟಲ್ ವಹಿವಾಟಿನ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪುರಸಭೆಯ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ಬೀದಿಬದಿ ವ್ಯಾಪಾರಿಗಳು ಸರ್ಕಾರದಿಂದ ನೀಡುವ ಸವಲತ್ತು ಬಳಸಿ ದೇಶವನ್ನು ಸರಳ ಭಾರತವನ್ನಾಗಿ ರೂಪಿಸುವಲ್ಲಿ ಸಹಕಾರ ಕೊಡಬೇಕು. ಮೊಬೈಲ್ ಮೂಲಕ ಹಣ ಪಾವತಿಸಲು ಡಿಜಿಟಲ್ ಪಾವತಿ ಒಳ್ಳೆಯ ಅವಕಾಶ ಎಂದರು.

ಪುರಸಭೆಯ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮಾತನಾಡಿ, ಡಿಜಿಟಲ್ ವ್ಯವಹಾರದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು. ಡಿಜಿಟಲ್ ಆ್ಯಪ್ ಬಳಸುವಾಗ ಜಾಗೃತರಾಗಿರಬೇಕು ಎಂದರು.

ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ ಮಾತನಾಡಿದರು. ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ನೀಡಿದರು. ಅಭಿಯಾನ ವ್ಯವಸ್ಥಾಪಕಿ ಐರಿನ್ ರೆಬೆಲ್ಲೊ ಡೇ ನಲ್ಮ್ ಯೋಜನೆ ಹಾಗೂ ಪಿ.ಎಂ. ಸ್ವನಿಧಿಯ ಬಗ್ಗೆ ಮಾಹಿತಿ ನೀಡಿದರು. ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ಸ್ವಸಹಾಯ ಸಂಘದವರಿಗೆ ಬಟ್ಟೆ ಚೀಲ ವಿತರಿಸಲಾಯಿತು. ಪುರಸಭಾ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಗುರುತು ಪತ್ರ ವಿತರಿಸಲಾಯಿತು. ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್‌ನ ಮ್ಯಾನೇಜರ್ ಶ್ರೀಹಾಸ್ ಹಾಗೂ ಸಿಬ್ಬಂದಿ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬಗ್ಗೆ ಮಾಹಿತಿ ನೀಡಿದರು.

ಒಕ್ಕೂಟದ ಅಧ್ಯಕ್ಷೆ ವಸಂತಿ, ಪಟ್ಟಣ ಮಾರಾಟ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಿಆರ್‌ಪಿ ಗೀತಾ ಸ್ವಾಗತಿಸಿದರು. ಸಮುದಾಯ ಸಂಘಟಕಿ ಉಮಾವತಿ ಕಾರ್ಯಕ್ರಮ ನಿರೂಪಿಸಿದರು. ಸಿಆರ್‌ಪಿ ಮಂಗಳಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net