More

    ಕಾಂಗ್ರೆಸ್‌ನಿಂದ ಸ್ವಾವಲಂಬಿ ಬದುಕಿಗೆ ಆದ್ಯತೆ; ಸಚಿವ ಎಂ.ಬಿ. ಪಾಟೀಲ

    ವಿಜಯಪುರ: ರೈತರು, ಬಡವರು, ಜನಸಾಮಾನ್ಯರು ಸ್ವಾವಲಂಬಿಯಾಗಿ ಬದುಕಲು ಕಾಂಗ್ರೆಸ್ ಅಭಿವೃದ್ಧಿ ಯೋಜನೆಗಳ ಮೂಲಕ ಶಕ್ತಿ ತುಂಬುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

    ತಿಕೋಟಾ ತಾಲೂಕಿನ ಟಕ್ಕಳಕಿ ಮತ್ತು ಜಾಲಗೇರಿ ಗ್ರಾಮಗಳಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.

    ಮುಂಬರುವ ದಿನಗಳಲ್ಲಿ ಟಕ್ಕಳಕಿ ಮತ್ತು ಜಾಲಗೇರಿ ಸುತ್ತಲಿನ ಉಳಿದ ಭಾಗಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಈ ಭಾಗದಲ್ಲಿ ಹೊಲಗಾಲುವೆ ನಿರ್ಮಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಈ ಭಾಗದ ರೈತರ ಜಮೀನಿಗೆ ನೀರು ಹರಿಸಲಾಗುವುದು ಎಂದರು.
    ಸಂಸದ ರಮೇಶ ಜಿಗಜಿಣಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಜಿಲ್ಲೆಯ ಪರ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಹೀಗಾಗಿ ರಾಜು ಆಲಗೂರ ಅವರಿಗೆ ಮತ ನೀಡಬೇಕೆಂದರು.

    ಸೀನಾ ರಾಮಣ್ಣ ರಾಠೋಡ, ಪ್ರಶಾಂತ ಝಂಡೆ, ಗೀತಾಂಜಲಿ ಪಾಟೀಲ ಮತ್ತು ಅನೀಲ ಚವಾಣ್ ಮಾತನಾಡಿ, ಸಚಿವ ಎಂ.ಬಿ. ಪಾಟೀಲರ ನೀರಾವರಿ ಯೋಜನೆಗಳಿಂದಾದ ಅನುಕೂಲತೆಗಳನ್ನು ವಿವರಿಸಿದರು.

    ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮಧುಕರ ಜಾಧವ, ವಿಠಲ ಪೂಜಾರಿ, ಪೋಪಟ ಮಹಾರಾಜರು, ಬಾಳು ಮಹಾರಾಜರು, ಪಿಂಟೂ ಮಹಾರಾಜರು, ರಾಮಣ್ಣ ಮಾಳಿ, ಗೀತಾಂಜಲಿ ಪಾಟೀಲ, ರಾಜುಗೌಡ ಪೊಲೀಸ್ ಪಾಟೀಲ, ರಾಘು ಕುಲಕರ್ಣಿ, ವಾಮನ ಚವಾಣ್, ಭೀಮರಾಯಗೌಡ ಪಾಟೀಲ, ಸತೀಶ ನಾಯಕ, ಉತ್ತಮ ಝಂಡೆ, ಶಿವಪ್ಪ ಚಲವಾದಿ, ಸಂಜು ಪವಾರ, ಆತ್ಮಾರಾಮ ಕಾಟಕರ, ಅನುಬಾಯಿ ಬಾಳು ರಾಠೋಡ, ಅಪ್ಪು ದಳವಾಯಿ, ರಾಜು ಪವಾರ, ತಾವರು ರಾಠೋಡ, ಓಗೆಪ್ಪ ಗೋಪಣೆ, ಈರನಗೌಡ ಬಿರಾದಾರ, ಧನಸಿಂಗ ಚವಾಣ್, ಬೂತಾಳಸಿದ್ದ ಒಡೆಯರ, ಅನೀಲ ಚವಾಣ್ ಮತ್ತಿತರರಿದ್ದರು. ಟಕ್ಕಳಕಿ ಗ್ರಾಮದಲ್ಲಿ ಹುಬನೂರ ಎಲ್‌ಟಿ -1 ರ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts