

ಕುಂದಾಪುರ: ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಹತ್ತರವಾದ ಪಾತ್ರ ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತೀಂದ್ರ ಮರವಂತೆ ಅಭಿಪ್ರಾಯಪಟ್ಟರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಸಹಯೋಗದಲ್ಲಿ ಕಾಲೇಜು ಸಭಾಂಂಗಣದಲ್ಲಿ ಶನಿವಾರ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಶುಭ ಹಾರೈಸಿದರು. ಎನ್ನೆಸ್ಸೆಸ್ಸ್ ವಿದ್ಯಾರ್ಥಿ ಪ್ರತಿನಿಧಿಗಳಾದ ಧನರಾಜ್, ಶ್ರೇಷ್ಠ ಮೇಸ್ತ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್.ಕೆ. ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ಗೌತಮಿ ನಾಯಕ್ ವಂದಿಸಿದರು.