ನಗರ ಶುಚಿತ್ವಕ್ಕೆ ನಿಸ್ವಾರ್ಥ ಸೇವೆ

day
Published on

ಕುಂದಾಪುರ : ಜನರ ಆರೋಗ್ಯ ಕಾಪಾಡಲು ಮತ್ತು ನಗರದ ಶುಚಿತ್ವ ನಿರ್ವಹಿಸಲು ಪೌರ ಕಾರ್ಮಿಕರು ಪ್ರತಿನಿತ್ಯ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ನಗರದ ಅಭಿವೃದ್ಧಿಗೆ ಪೌರ ಕಾರ್ಮಿಕರ ಸೇವೆ ಹಾಗೂ ಕೊಡುಗೆ ಅವಿಸ್ಮರಣೀಯ ಮತ್ತು ಶ್ಲಾಘನೀಯ. ಪೌರ ಕಾರ್ಮಿಕರ ಅಭಿವೃದ್ಧಿಗಾಗಿ ಪುರಸಭೆ ಹಾಗೂ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಪ್ರಯೋಜನ ಪ್ರತಿಯೊಬ್ಬ ಪೌರ ಕಾರ್ಮಿಕರು ಪಡೆದುಕೊಂಡು ತಮ್ಮ ಕುಟುಂಬದ ಜವಾಬ್ದಾರಿ ನಿರ್ವಹಿಸಬೇಕು ಎಂದು ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ ಹೇಳಿದರು.

ಕುಂದಾಪುರ ಪುರಸಭೆ ವತಿಯಿಂದ ಕುಂದಾಪುರ ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಬುಧವಾರ ಜರುಗಿದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಡಾ.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪುರಸಭೆ ಮುಖ್ಯಾಧಿಕಾರಿ ಆನಂದ ಜೆ. ಪ್ರಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ ಹಾಗೂ ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ವಸಂತ ಉಪಸ್ಥಿತರಿದ್ದರು. ಪೌರ ಕಾರ್ಮಿಕರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪುರಸಭೆ ಅಭಿಯಂತರ ಗುರುಪ್ರಸಾದ ಸ್ವಾಗತಿಸಿದರು.

ಪೌರ ಕಾರ್ಮಿಕರಿಗೆ ಊಟ, ವಸತಿ, ಆರೋಗ್ಯ ತಪಾಸಣೆ, ಮಕ್ಕಳಿಗೆ ಉಚಿತ ಶಿಕ್ಷಣ, ಮರಣಾನಂತರ ವಿಮೆ ಸೌಲಭ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಸರ್ಕಾರ ನೀಡುತ್ತಿದ್ದು, ಖಾಲಿ ಇರುವ ಪೌರ ಕಾರ್ಮಿಕರನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಅಲ್ಲಿಯವರೆಗೆ ಹಾಲಿ ಇರುವ ಪೌರ ಕಾರ್ಮಿಕರು ತಮ್ಮ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. -ಆನಂದ ಜೆ., ಪುರಸಭೆ ಮುಖ್ಯಾಧಿಕಾರಿ https://www.vijayavani.net/kishora-yakshagana-sambhrama-inogaration https://www.vijayavani.net/mla-sunil-kumar-kdp-meeting-issue

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net