20.4 C
Bengaluru
Sunday, January 19, 2020

ಕಾಗವಾಡ: ನಿಸ್ವಾರ್ಥ ಸೇವೆಯಿಂದ ಸಂಘದ ಅಭಿವೃದ್ಧಿ ಸಾಧ್ಯ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಕಾಗವಾಡ: ಆಡಳಿತ ಮಂಡಳಿ ದೂರದೃಷ್ಟಿ, ಸಿಬ್ಬಂದಿ ಬದ್ಧತೆ, ಸಾಲಗಾರರ ಪ್ರಾಮಾಣಿಕತೆ ಮೇಲೆ ಸಹಕಾರಿ ಸಂಸ್ಥೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಕಾಗವಾಡ ಪಟ್ಟಣದಲ್ಲಿ ಶನಿವಾರ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

116 ವರ್ಷಗಳ ಹಿಂದೆ ಸಹಕಾರಿ ಸಂಘಗಳನ್ನು ಸ್ಥಾಪನೆಗೊಂಡಿವೆ. ಅಂದಿನ ಮಹನೀಯರು ತಮ್ಮ ಸ್ವಾರ್ಥ ಬದಿಗೆ ಇರಿಸಿ ಸಂಘ ಸ್ಥಾಪಿಸಿ ಅಭಿವೃದ್ಧಿಪಡಿಸಿದ್ದಾರೆ. ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುತ್ತ ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಡೆದು ಸಂಘವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯ ಎಂದರು. ನಾನು ಸಹ ಸಹಕಾರಿ ರಂಗದಿಂದಲೇ ಬೆಳೆದು ಬಂದು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ರಾಜಕೀಯ ಪ್ರವೇಶದ ಮೊದಲ ಮೆಟ್ಟಿಲು ಸಹಕಾರಿ ಕ್ಷೇತ್ರವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.

ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ ಮಾಡಿ, ಚುನಾವಣೆ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನಹರಿಸುವುದು
ಪ್ರತಿಯೊಬ್ಬ ರಾಜಕಾರಣಿಯ ಕರ್ತವ್ಯ ಎಂದು ಹೇಳಿದರು. ಯುವ ಮುಖಂಡ ಶ್ರೀನಿವಾಸ ಪಾಟೀಲ ಮಾತನಾಡಿದರು.

ಸಾನ್ನಿಧ್ಯ ವಹಿಸಿದ್ದ ಕಾಗವಾಡ ಗುರುದೇವಾಶ್ರಮದ ಪೀಠಾಧಿಪತಿ ಶ್ರೀ ಯತೀಶ್ವರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಶತಮಾನೋತ್ಸವ ಸಮಾರಂಭದ ಅಂಗವಾಗಿ ಶತಮಾನೋತ್ಸವ ಭವನದ ಅಡಿಗಲ್ಲು ಸಮಾರಂಭ, ಸ್ಮರಣ ಸಂಚಿಕೆ ಬಿಡುಗಡೆ, ಹಿರಿಯ ಸದಸ್ಯರಿಗೆ ನೆನಪಿನ ಕಾಣಿಕೆ ವಿತರಣೆ ಕಾರ್ಯಕ್ರಮ ಜರುಗಿದವು.

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಣ್ಣ ಸವದಿ, ಸಹಕಾರಿ ಧುರೀಣ ಡಿ.ಟಿ.ಪಾಟೀಲ, ಶಿರೋಳ ದತ್ತ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಸಿದ್ಧಗೌಡ ಪಾಟೀಲ, ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಜ್ಯೋತಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯ ಅಜಿತ ಚೌಗಲಾ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶೀತಲಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪೂಜಾರಿ, ಕಾಗವಾಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀದೇವಿ ಚೌಗಲಾ, ಸುಭಾಷ ಕಟಾರೆ, ಪ್ರಕಾಶ ಕಟಾರೆ, ಅಭಯ ಅಕಿವಾಟೆ, ಶಿವಾನಂದ ಪಾಟೀಲ, ಅಣ್ಣಾಸಾಬ ಪಾಟೀಲ, ಜಯಪಾಲ ಯರಂಡೋಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಾಂತಿನಾಥ ಕಿನಂಗೆ, ಉಪಾಧ್ಯಕ್ಷ ಬಸವರಾಜ ದಾದಾ ಉಪ್ಪಾರ, ಆಡಳಿತ ಮಂಡಳಿ ಸದಸ್ಯರಾದ ಪ್ರಮೋದ ಕಟಾರೆ, ಜ್ಯೋತಿಕುಮಾರ ಪಾಟೀಲ, ಬಸಗೌಡ ಪಾಟೀಲ, ಬಾಬಾಸಾಬ ಚೌಗಲಾ, ಕುಮಾರ ಪೂಜಾರಿ, ಅನಿಲ ಭಜಂತ್ರಿ, ಕವಿತಾ ಮಗದುಮ್ಮ, ವಿಜುಬಾಯಿ ಕವಟಗೆ, ಹನುಮಂತ ಸಂಕ್ರಟ್ಟಿ, ಮುಖ್ಯಕಾರ್ಯನಿರ್ವಾಹಕ ರಾಜೇಂದ್ರ ಪೂಜಾರಿ ಇತರರು ಇದ್ದರು. ನಿವೃತ್ತ ಉಪನ್ಯಾಸಕ ಬಿ.ಎ. ಪಾಟೀಲ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...