More

  ಗುಣಮಟ್ಟದ ಕೃಷಿ ಪರಿಕರ ಮಾರಾಟ ಮಾಡಿ

  ಮದ್ದೂರು : ಪ್ರಸಕ್ತ ಮುಂಗಾರಿನಲ್ಲಿ ತಾಲೂಕಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರೈತರು ಭೂಮಿ ಸಿದ್ಧತೆ ಕಾರ್ಯದಲ್ಲಿ ತೊಡಗಿದ್ದಾರೆ. ತಾಲೂಕಿನ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟಗಾರರು ಗುಣಮಟ್ಟದ ಕೃಷಿ ಪರಿಕರಗಳನ್ನು ಮಾರಾಟ ಮಾಡಬೇಕೆಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ಸೂಚನೆ ನೀಡಿದರು.

  ಪಟ್ಟಣದ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ 2024-25 ನೇ ಸಾಲಿನ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ತಾಲೂಕಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರು ಜಮೀನುಗಳನ್ನು ಬಿತ್ತನೆ ಕಾರ್ಯಕ್ಕೆ ಸಿದ್ಧಗೊಳಿಸಿದ್ದಾರೆ. ವಿವಿಧ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ. ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಕರ್ತವ್ಯನಿರ್ವಹಿಸಬೇಕು ಎಂದರು.

  ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಹಾಗೂ ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ ಮಾರಾಟ ಮಾಡುವುದರ ಜತೆಗೆ ಇಲಾಖೆಗೆ ವಹಿವಾಟಿನ ವರದಿಯನ್ನು ಕಾಲಕಾಲಕ್ಕೆ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕ ಅಶೋಕ್ ತಿಳಿಸಿದರು.

  ಕೃಷಿ ಉಪ ನಿರ್ದೇಶಕಿ ಕೆ.ಮಾಲತಿ ಮಾತನಾಡಿ, ರಸಗೊಬ್ಬರ ಮಾರಾಟದಲ್ಲಿ ಕೃತಕ ಅಭಾವ ಸೃಷ್ಟಿಸದಂತೆ ಹಾಗೂ ಗೊಬ್ಬರವನ್ನು ರೈತರು ಖರೀದಿ ಮಾಡಿದಾಗ ಕಡ್ಡಾಯವಾಗಿ ರಸೀದಿ ನೀಡಿ ಮಾರಾಟ ಮಾಡುವಂತೆ ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು.

  ಕೃಷಿ ನಿರ್ದೇಶಕ ಪರಮೇಶ್ ಮಾತನಾಡಿ, ರೈತರು ಅಧಿಕೃತ ಲೈಸನ್ಸ್ ಹೊಂದಿದ ರಸಗೊಬ್ಬರ ಮಾರಾಟಗಾರರಿಂದ ಮಾತ್ರ ಖರೀದಿ ಮಾಡಬೇಕು ಹಾಗೂ ತಾಲೂಕಿನ ವಿವಿಧ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ವಿತರಿಸುತ್ತಿದ್ದು, ರೈತರ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

  See also  ಕರೊನಾ ಪ್ರಹಾರ… ಟೂರಿಸಂ ತತ್ತರ..

  ಕೃಷಿ ಅಧಿಕಾರಿಗಳಾದ ರೂಪಶ್ರೀ, ದಯಾನಂದ್, ಭವಾನಿ, ಕೃಷ್ಣೇಗೌಡ, ಕರುಣ, ಕೆಂಪೇಗೌಡ, ಶೈಲಜಾ, ಇಪ್ಕೋ ಸಂಸ್ಥೆಯ ಡ್ರೋನ್ ತಂತ್ರಜ್ಞ ಧನರಾಜ್ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts