ಸಹೋದರಿ ಮದುವೆ ಮಾಡಲು ಗಾಂಜಾ ಮಾರಾಟ

ಬೆಂಗಳೂರು: ಸಹೋದರಿ ಮದುವೆ ಮಾಡುವ ಸಲುವಾಗಿ ಒಡಿಶಾದಿಂದ ರೈಲಿನಲ್ಲಿ ಮಾದಕ ವಸ್ತು ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ದತೆ ನಡೆಸಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್ ಬಂಧಿತ. ಈತನಿಂದ ೧ ಲಕ್ಷ ರೂ. ಮೌಲ್ಯದ ೫ ಕೆ.ಜಿ ೨೦ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ನಗರದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಪರಿಚಯಸ್ಥನೊಬ್ಬ ಸಲಹೆ ಮೇರೆಗೆ ಒಡಿಶಾಕ್ಕೆ ತೆರಳಿ ಕಡಿಮೆ ಮೊತ್ತಕ್ಕೆ ಗಾಂಜಾ ತಂದು ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಬಾಣಸವಾಡಿ ಠಾಣೆ ವ್ಯಾಪ್ತಿಯ ಎಸ್‌ಎಂವಿಟಿ ರೈಲ್ವೆ ನಿಲ್ದಾಣಕ್ಕೆ ಗಾಂಜಾ ಬ್ಯಾಗ್ ಹಿಡಿದು ಬಂದಿದ್ದ. ಈ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಹೋದರಿ ಮದುವೆಗಾಗಿ ದಂಧೆ
ಹೋಟೆಲ್‌ನಲ್ಲಿ ಬರುತ್ತಿದ್ದ ಸಂಬಳದಿಂದ ಆರೋಪಿಯ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ಜತೆಗೆ ಸಹೋದರಿಯ ಮದುವೆ ಹೊಣೆಗಾರಿಕೆಯನ್ನು ಹೊತ್ತಿದ್ದ. ಹೀಗಾಗಿ ಸ್ನೇಹಿತನೊಬ್ಬನ ಸಲಹೆ ಮೇರೆಗೆ ಒಡಿಶಾಗೆ ಹೋಗಿ, ಅಲ್ಲಿನ ಲಾರಿ ಚಾಲಕನ ಮೂಲಕ ಗಾಂಜಾ ಖರೀದಿಸಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಸಾರ್ವಜನಿಕರು, ಕಾಲೇಜು ವಿಧ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…