ಪಂಚರಾಜ್ಯ ಫಲಿತಾಂಶ ಇಂದು

ನವದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ಮತದಾನ ನಡೆದಿರುವ ಪ್ರತಿಷ್ಠಿತ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ 8500 ಅಭ್ಯರ್ಥಿಗಳ ರಾಜಕೀಯ ಭವಿಷ್ಯವು 1.74 ಲಕ್ಷ ಇವಿಎಂನಲ್ಲಿ ಭದ್ರವಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನ 12ಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಮಧ್ಯಪ್ರದೇಶದಲ್ಲಿ ಚುನಾವಣೆ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಮತದಾನ ಎಣಿಕೆ ಸಂದರ್ಭದಲ್ಲಿ ಕೆಲ ಮಾರ್ಗಸೂಚಿ ಹೊರಡಿಸಲಾಗಿದೆ. ಮತದಾನ ಎಣಿಕೆಯ ಲೈವ್ ಸ್ಟ್ರೀಮಿಂಗ್ ರದ್ದುಗೊಳಿಸಿ, ಎಣಿಕೆ ಕೇಂದ್ರಗಳಲ್ಲಿ ವೈ-ಫೈ ಸವಲತ್ತು ಕಡಿತಗೊಳಿಸಲಾಗಿದೆ. ಹಾಗೆಯೇ ಎಲ್ಲ ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

Leave a Reply

Your email address will not be published. Required fields are marked *