ವಿಜಯವಾಣಿ ಸುದ್ದಿಜಾಲ ಧಾರವಾಡ
ಸಂತೋಷ ಲಾಡ್ ಫೌಂಡೇಶನ್‌ನಿ0ದ ಜೂ. 15ರಂದು ಬೆಳಗ್ಗೆ 8 ಗಂಟೆಯಿ0ದ ಬುದ್ಧ, ಬಸವ ಮತ್ತು ಅಂಬೇಡ್ಕರ್ ಕುರಿತು ವಿಚಾರ ಸಂಕಿರಣವನ್ನು ನಗರದ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಲಾಗಿದೆ. ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ, ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಹರಿಹರ ಕನಕ ಗುರುಪೀಠದ ಕಾಗಿನೆಲೆ ಮಹಾಸಂಸ್ಥಾನ ಜಗದ್ಗುರು ನಿರಂಜನಾನ0ದಪುರಿ ಸ್ವಾಮೀಜಿ, ಹೊಸದುರ್ಗ ಜಗದ್ಗುರು ಕುಂಚಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶಾಂತವೀರ ಸ್ವಾಮೀಜಿ, ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಜಗದ್ಗುರು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಇತರರು ಸಾನ್ನಿಧ್ಯ ವಹಿಸುವರು.
ಬೆಳಗ್ಗೆ 10ರಿಂದ ಭಗವಾನ್ ಬುದ್ಧ ಕುರಿತು ಮೊದಲ ಗೋಷ್ಠಿ, ಬೆಳಗ್ಗೆ 11.30ರಿಂದ ಶ್ರೀ ಬಸವೇಶ್ವರರ ಕುರಿತು 2ನೇ ಗೋಷ್ಠಿ, ಮಧ್ಯಾಹ್ನ 2 ಗಂಟೆಯಿ0ದ ಡಾ. ಅಂಬೇಡ್ಕರ್ ಕುರಿತು 3ನೇ ಗೋಷ್ಠಿ ಜರುಗಲಿದೆ. ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಸಮಾರೋಪ ನುಡಿಗಳನ್ನಾಡುವರು. ನಂತರ ಲಘು ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಬುದ್ಧ ಬಸವ ಅಂಬೇಡ್ಕರ್ ಕುರಿತು ವಿಚಾರ ಸಂಕಿರಣ

You Might Also Like
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…