ಸುಳ್ಯ: ಪ್ರತಿಯೊಬ್ಬ ನಾಗರಿಕ ಪರಿಸರವನ್ನು ಪ್ರೀತಿಸುವುದರಿಂದ ಮುಂದಿನ ಪೀಳಿಗೆಗೆ ಒಳ್ಳೆಯ ಪ್ರಕೃತಿ ಉಳಿಸಬಹುದು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ ಮೂಡಿತ್ತಾಯ ಹೇಳಿದರು.
ನಗರದ ನೆಹರು ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಸುಳ್ಯದ ವಿದ್ಯಾರ್ಥಿಗಳಿಗೆ ‘ಪಶ್ಚಿಮ ಘಟ್ಟಗಳ ಸಂರಕ್ಷಣೆ’ ಕುರಿತಾಗಿ ಕಾಲೇಜಿನಲ್ಲಿ ಆಯೋಜಿಸಲಾದ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮನಸ್ವಿ ಮತ್ತು ತಂಡದವರು ಪ್ರಾರ್ಥಿಸಿದರು. ಕಾರ್ತಿಕ್ ಜಿ.ಶರ್ಮ ಅತಿಥಿಗಳನ್ನು ಪರಿಚಯಿಸಿದರು. ನೇಚರ್ ಕ್ಲಬ್ ಕಾರ್ಯದರ್ಶಿ ಶಿಲ್ಪಾ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಕಾಲೇಜು ಆವರಣದಲ್ಲಿ ಗಿಡ ನೆಡಲಾಯಿತು.