ನೀರಿನ ಮಾದರಿ ಲ್ಯಾಬ್‌ಗೆ ರವಾನೆ

blank

ಮುಂಡರಗಿ: ತಾಲೂಕಿನ ಕೊರ್ಲಹಳ್ಳಿ, ಗಂಗಾಪುರ, ಶೀರನಹಳ್ಳಿ ಭಾಗದ ತುಂಗಭದ್ರಾ ನದಿ ನೀರು ಹಸಿರು ಬಣ್ಣಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕೆ ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಕೆಲವು ದಿನಗಳಿಂದ ನದಿ ನೀರಿನ ಹರಿವು ನಿಂತಿತ್ತು. ಏಕಾಏಕಿಯಾಗಿ ನೀರು ಹಸಿರು ಬಣ್ಣಕ್ಕೆ ತಿರುಗಿರುವುದು ಈ ಭಾಗದ ಜನರಲ್ಲಿ ತೀವ್ರ ಆತಂಕ ತಂದೊಡ್ಡಿದೆ. ‘ವಿಜಯವಾಣಿ’ ಪತ್ರಿಕೆಯಲ್ಲಿ ಜ.16ರಂದು ‘ಹಸಿರು ಬಣ್ಣಕ್ಕೆ ತಿರುಗಿದ ನದಿಯ ಜಲ’ ಶೀರ್ಷಿಕೆಯಡಿ ವಿಸ್ತತವಾಗಿ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.
ಕೊರ್ಲಹಳ್ಳಿ, ಗಂಗಾಪುರ ಭಾಗದ ತುಂಗಭದ್ರಾ ನದಿಯ ದಡಕ್ಕೆ ತೆರಳಿದ ತಹಸೀಲ್ದಾರ್ ಎರ‌್ರಿಸ್ವಾಮಿ ಪರಿಶೀಲನೆ ನಡೆಸಿದರು. ಈ ವೇಳೆ ಪ್ರತಿಕ್ರಿಯಿಸಿದ ಅವರು, ಬ್ಯಾರೇಜ್ ಹಿನ್ನೀರು ಸೇರಿ ಕೆಲ ಕಡೆ ನೀರು ಹಸಿರು ಬಣ್ಣವಿಲ್ಲ. ಈ ಭಾಗದಲ್ಲಿ ಮಾತ್ರ ನದಿ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಇದ್ದರಿಂದ ಈ ಭಾಗದ ಜನರು ಮತ್ತು ಪಶುಗಳು ನೀರನ್ನು ಕುಡಿಯಬಾರದು ಎಂದು ತಿಳಿಸಲಾಗಿದೆ. ಈ ಭಾಗದ ಗ್ರಾಪಂ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದೆ. ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರಲಿದ್ದು, ವರದಿ ಆಧಾರದ ಮೇಲೆ ಸೂಕ್ತ ಕ್ರಮವನ್ನು ವಹಿಸುತ್ತೇವೆ. ಅಲ್ಲಿಯವರೆಗೂ ಯಾರೂ ನೀರು ಕುಡಿಯುಬಾರದು ಎಂದು ತಿಳಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯವರು ನದಿ ಭಾಗಕ್ಕೆ ಭೇಟಿ ನೀಡಿ ನೀರಿನ ಬಣ್ಣ ಹಸಿರಾಗಿ ಬದಲಾಗುವುದಕ್ಕೆ ಕಾರಣವೇನು? ಎಂಬುದನ್ನು ಸ್ಪಷ್ಟಪಡಿಸಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ.

Share This Article

ಕೋಳಿ ಮಾಂಸ ಅಥವಾ ಮೀನು..ಆರೋಗ್ಯಕ್ಕೆ ಯಾವುದು ಒಳ್ಳೆಯದು? Chicken Or Fish

Chicken Or Fish: ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಗತ್ಯ.  ವಿಭಿನ್ನ…

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…